ಆನೇಕಲ್: ಪೊಲೀಸ್ ಇಲಾಖೆಯ ಅಸಿಸ್ಟಂಟ್ ಸಬ್ಇನ್ಸ್ಪೆಕ್ಟರ್ (ಎಎಸ್ಐ) ಒಬ್ಬರ ಮಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್ಎಸ್ಆರ್ ಪೊಲೀಸ್ ಠಾಣೆಯ ಎಎಸ್ಐ ನಾಗರಾಜ್ ಅವರ ಮಗ ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಶಾಂತ್, ನಗರದ ವಿಜಯ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಬೆಂಗಳೂರು ಹೊರವಲಯ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಜಿಎಸ್ಟಿ ಕಚೇರಿ ಕಟ್ಟಡದಿಂದ ಜಿಗಿದು ಆಫೀಸ್ ಬಾಯ್ ಆತ್ಮಹತ್ಯೆ
ಬೆಂಗಳೂರು: ಜಿಎಸ್ಟಿ ಕಚೇರಿ ಕಟ್ಟಡದಿಂದ ಜಿಗಿದು ಕಚೇರಿ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಜಿಎಸ್ಟಿ ಕಚೇರಿಯಲ್ಲಿ ನಡೆದಿದೆ. ಕಟ್ಟಡದಿಂದ ಜಿಗಿದು ಆಫೀಸ್ ಬಾಯ್ ಲಕ್ಷ್ಮಣ(26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಕಮರ್ಷಿಯಲ್ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸುಸ್ತಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ಬಾಣಂತಿ ಆಸ್ಪತ್ರೆಯಲ್ಲೆ ಸಾವು
ಚಿಕ್ಕಬಳ್ಳಾಪುರ: ತನಗೆ ಸುಸ್ತಾಗುತ್ತಿದೆ ಎಂದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬಾಣಂತಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ನಗರದ ಜೈನ್ ಮಿಷನ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಒಂದೂವರೆ ತಿಂಗಳ ಗಂಡು ಮಗು ಬಿಟ್ಟು, ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಕಳವಾರ ಗ್ರಾಮದ ಗಾಯತ್ರಿ (25) ಮೃತ ಬಾಣಂತಿ. ಮೃತಳ ಸಂಬಂಧಿಗಳಿಂದ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಬಳಿ ಮೃತಳ ಸಂಬಂಧಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಈ ಮಧ್ಯೆ, ಹೃದಯಾಘಾತದಿಂದ ಸಾವು ಸಂಬಂಧಿಸಿದೆ ಎಂದು ಸಮಜಾಯಿಷಿ ನೀಡಿrಉವ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ ಗಾಯತ್ರಿ.
ಸುಸ್ತು ಹಾಗೂ ಉಸಿರಾಟ ಸಮಸ್ಯೆ ಇತ್ತು. ಎರಡು ಭಾರಿ ಹೃದಯಾಘಾತವಾಗಿರುವುದಾಗಿ ವೈದ್ಯರ ಸ್ಪಷ್ಟನೆಯಲ್ಲಿಮ ಉಲ್ಲೇಖವಾಗಿದೆ. ಗಾಯತ್ರಿಗೆ ಒಂದೂವರೆ ತಿಂಗಳ ಹಿಂದೆ ಸಿಜೇರಿಯನ್ ಮೂಲಕ ಎರಡನೆಯ ಹೆರಿಗೆಯಾಗಿತ್ತು. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.
Published On - 6:09 pm, Mon, 27 June 22