AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ರಾಜ್ಯದಲ್ಲಿ 2019 ಏಪ್ರಿಲ್ 1ರ ಮೊದಲು ನೋಂದಣಿಯಾದ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಆ ಮೂಲಕ ಸುಳ್ಳು ಸುದ್ದಿಗೆ ಇಲಾಖೆ ತೆರೆ ಎಳೆದಿದ್ದು, ವಾಹನ ಮಾಲೀಕರು ಕೂಡಲೇ ಅಳವಡಿಸಿಕೊಳ್ಳಲು ಸೂಚಿಸಿದೆ.

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ
ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್Image Credit source: spinny
ಕಿರಣ್​ ಸೂರ್ಯ
| Edited By: |

Updated on:Apr 04, 2026 | 8:20 PM

Share

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಲ್ಲ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿತ್ತು. ಇದೀಗ ಅದೆಲ್ಲದಕ್ಕೂ ರಾಜ್ಯ ಸಾರಿಗೆ ಇಲಾಖೆ ತೆರೆ ಎಳೆದಿದೆ.

ಇದನ್ನೂ ಓದಿ: ನಂಬರ್ ​ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ

ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಪ್ರಕಟಣೆಯಲ್ಲಿ ಏನಿದೆ?

ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​​ಪಿ ಅಳವಡಿಕೆ ಕಡ್ಡಾಯ ಮಾಡಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮ ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019ರ ಏಪ್ರಿಲ್ 1ರ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.

ಇದನ್ನೂ ಓದಿ: ವಾಹನ ಮಾಲೀಕರಿಗೆ ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಹೆಚ್ಎಸ್ಆರ್​ಪಿ ಅಳವಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸುವಂತೆ ಸೂಚಿಸಿತ್ತು. ಇದೇ ಸಂದರ್ಭದಲ್ಲಿ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:18 pm, Sat, 4 April 26

Follow Us
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು