ಹುಬ್ಬಳ್ಳಿ ಗಲಭೆ ಕೇಸ್ ವಾಪಸ್: ರಾಷ್ಟ್ರಪತಿ, ಪ್ರಧಾನಿಗೆ ನಾರಾಯಣಸ್ವಾಮಿ ಪತ್ರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2024 | 3:38 PM

2022 ಎಪ್ರೀಲ್ 16 ರ ರಾತ್ರಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಾಟ್ಸಪ್‌ ಸ್ಟೇಟಸ್ ವಿಚಾರವಾಗಿ ನಡೆದ ಗಲಭೆ ಕೇಸ್​ನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ ಹಿನ್ನೆಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಅವರು ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಪತ್ರ  ಬರೆದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್: ರಾಷ್ಟ್ರಪತಿ, ಪ್ರಧಾನಿಗೆ ನಾರಾಯಣಸ್ವಾಮಿ ಪತ್ರ
ರಾಷ್ಟ್ರಪತಿ, ಪ್ರಧಾನಿಗೆ ನಾರಾಯಣಸ್ವಾಮಿ ಪತ್ರ
Follow us on

ಬೆಂಗಳೂರು, ಅ.15: ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ ಹಿನ್ನೆಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಅವರು ಕೇಂದ್ರದ ನಾಯಕರಿಗೆ ಪತ್ರ  ಬರೆದಿದ್ದಾರೆ. ಹೌದು,  ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಅರ್ಜುನ್ ರಾಮ್ ಮೇಘವಾಲ್ ಹಾಗೂ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ರಿಗೂ ಪತ್ರ ಬರೆದು ಸಂಪುಟ ನಿರ್ಧಾರವನ್ನು ಮರು ಪರಿಶೀಲನೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.

ಇನ್ನು ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ:ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾಂಗ್ರೆಸ್​ ಸರ್ಕಾರ; ಕಿಡಿಕಾರಿದ ಬಿಜೆಪಿ ನಾಯಕರು

ಏನಿದು ಘಟನೆ

2022 ಎಪ್ರೀಲ್ 16 ರ ರಾತ್ರಿ ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿಯಲ್ಲಿ ವಾಟ್ಸಪ್‌ ಸ್ಟೇಟಸ್ ವಿಚಾರವಾಗಿ ನಡೆದ ಗಲಭೆ ವಿಕೋಪಕ್ಕೆ ಹೋಗಿತ್ತು. ಬಳಿಕ ಮುಸ್ಲಿಂ ಧರ್ಮದ ಬಗ್ಗೆ ಸ್ಟೇಟಸ್​ ಹಾಕಿದ್ದ ಯುವಕನನ್ನ ಬಂಧಿಸಿದ್ದರು. ಇದರಿಂದ ಠಾಣೆಗೆ ಮುತ್ತಿಗೆ ಹಾಕಿದ್ದ ಸುಮಾರು 150 ಜನರ ತಂಡ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ಪೊಲೀಸ್‌ ಠಾಣೆಯ ಮುಂದೆ ಗಲಾಟೆ ಮತ್ತು ದಾಂಧಲೆ ನಡೆಸಿದ್ದರು. ಇದು ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಿಜೆಪಿ ಈ ಗಲಭೆ ಖಂಡಿಸಿ ಬಿದೀಗಿಳಿದು ಹೋರಾಟ ಕೂಡ ಮಾಡಿತ್ತು. ನಂತರ ಗಲಭೆ ಕೇಸ್​ನಲ್ಲಿ ಕೆಲವರ ಬಂಧನವಾಗಿತ್ತು. ಇದೀಗ ಗಲಭೆಯ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಲು ನಿರ್ಧಾರ ಮಾಡಿದೆ. ಇದಕ್ಕೆ ಕೇಸರಿ ಕಲಿಗಳು ಕೆರಳಿ ಕೆಂಡವಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ