ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ

ಬೆಂಗಳೂರಿನಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ವೈರಲ್ ಸೋಂಕು ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಹವಾಮಾನದಲ್ಲಿ ಆಗಿರುವ ಬದಲಾವಣೆ ಕೂಡ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ ತಜ್ಞರು. ಹೀಗಾಗಿ, ಸಾರ್ವಜನಿಕರು ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕೆಂಬ ಬಗ್ಗೆ ತಜ್ಞರು ಸಲಹೆ ನೀಡಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ
ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು
Follow us
Poornima Agali Nagaraj
| Updated By: Ganapathi Sharma

Updated on: Jun 15, 2024 | 10:37 AM

ಬೆಂಗಳೂರು, ಜೂನ್ 15: ಬೆಂಗಳೂರಿನಲ್ಲಿ (Bengaluru) ಒಂದು‌ ವಾರದಿಂದ‌ ಹವಮಾನದಲ್ಲಿ ಭಾರಿ (Climate Change) ಬದಲಾವಣೆಯಾಗುತ್ತಿದ್ದು, ಹವಮಾನ ವೈಪರಿತ್ಯದಿಂದ ಜನರಲ್ಲಿ ಹಲವು ಆರೋಗ್ಯ ಸಮಸ್ಯೆಗಳು (health Issues) ಕಾಡುವುದಕ್ಕೆ ಶುರುವಾಗಿದೆ‌‌. ಮಳೆಯಲ್ಲಿ ಸ್ವಲ್ಪ ನೆನೆದರೂ ಚಳಿ, ಜ್ವರ, ಕೆಮ್ಮು, ನೆಗಡಿ, ತಲೆನೋವಿನಂತಹ ಕಾಯಿಲೆಗಳು ಬಾಧಿಸುವುದಕ್ಕೆ ಶುರುವಾಗಿದ್ದು, ನಗರದ ಆಸ್ಪತ್ರೆಗಳಲ್ಲಿ ಆಸ್ಪತ್ರೆಗೆ ದಾಖಾಲಾಗುವ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ‌ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.‌ ಸದ್ಯ ನಗರದಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ, ಮಧ್ಯಾಹ್ನ ಚಳಿಯ ವಾತಾವರಣ, ಸಂಜೆಯ ಮೇಲೆ ಮಳೆ, ಚಳಿ ಕಂಡುಬರುತ್ತಿದ್ದು, ಈ ಬದಲಾವಣೆ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಜೊತೆಗೆ ಈ ಅವಧಿಯಲ್ಲಿ ಫುಡ್ ಪಾಯಿಸನ್ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಎಲ್ಲೆಂದರಲ್ಲಿ ನೀರು, ತಿಂಡಿ, ಊಟ ಮಾಡುವುದು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಂದಿರಾ ಗಾಂಧಿ‌‌ ಮಕ್ಕಳ‌ ಆಸ್ಪತ್ರೆ ನಿರ್ದೇಶಕ ಡಾ ‌ಸಂಜಯ್ ಕೂಡ ಸಲಹೆ ನೀಡಿದ್ದಾರೆ.

ವೈದ್ಯರು ನೀಡಿರುವ ಸಲಹೆಗಳು ಏನು?

  • ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು
  • ಮಕ್ಕಳಿಗೆ ಬಿಸಿನೀರು ಹೆಚ್ಚು ಕೊಡುವುದು
  • ಮಳೆಯಲ್ಲಿ ನೆನೆಯದೇ ಇರುವುದು
  • ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು
  • ಮನೆಯ ಸುತ್ತ- ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು
  • ಸಾಧ್ಯವಾದಷ್ಟು‌ ಮನೆ ಊಟವನ್ನೇ ಮಾಡುವುದು

ಇದನ್ನೂ ಓದಿ: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

ಒಟ್ಟಿನಲ್ಲಿ ಮಂಗಾರು ಮಳೆ‌ ಈಗಷ್ಟೇ ಚುರುಕಾಗಿದ್ದು, ಮುಂದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜನರು ಆರೋಗ್ಯದ ಬಗ್ಗೆ ನಿಗಾವಹಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ