ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR

ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ಎಸಗಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ. BMTC ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ ಮಾಡಲಾಗಿದೆ.

ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR
ಪ್ರಾತಿನಿಧಿಕ ಚಿತ್ರ
Follow us
Kiran Surya
| Updated By: Digi Tech Desk

Updated on:Jul 31, 2023 | 10:45 AM

ಬೆಂಗಳೂರು, ಜುಲೈ 31: ಬಿಎಂಟಿಸಿಯಲ್ಲಿ ಭಾರಿ ಗೋಲ್ ಮಾಲ್ ನಡೆದಿದೆ. BMTC ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ನಡೆಸಿದ್ದಾರೆ ಎಂದು ಬಿಎಂಟಿಸಿ ಸಹಾಯಕ ಭದ್ರತಾ-ಜಾಗೃತಾಧಿಕಾರಿ ಸಿ.ಕೆ.ರಮ್ಯಾರವರು ದೂರು ದಾಖಲಿಸಿದ್ದು BMTC ವಾಣಿಜ್ಯ ವಿಭಾಗದ ಮುಖ್ಯ ಸಂಚಾರಕ ಸೇರಿ 6 ಜನರ ಮೇಲೆ ಬೆಂಗಳೂರಿನ ವಿಲ್ಸನ್​ಗಾರ್ಡನ್​ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬಿಎಂಟಿಸಿಯ ಟೆಂಡರ್‌ಗಳ ನೀಡಿಕೆ, ಫ್ಲ್ಯಾಟ್‌ಗಳು ಮತ್ತು ವಾಣಿಜ್ಯ ಮಳಿಗೆಗಳ ಹಂಚಿಕೆ, ಟೆಂಡರ್‌ ಅವಧಿ ವಿಸ್ತರಣೆಗೆ ಸಂಬಂಧಪಟ್ಟ ಕಡತಗಳಿಗೆ BMTC ಎಂಡಿ, ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ರೇಜು, ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಕೆ ಅರುಣ ಸಹಿ ನಕಲು ಮಾಡಲಾಗಿದೆ. ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಾರ ಅಧಿಕಾರಿ ಶ್ಯಾಮಲಾ ಎಸ್ ಮುದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತ, ಸಹಾಯಕ ಸಂಚಾರ ಅಧೀಕ್ಷಕಿ ಟಿ ಅನಿತಾ, ಸಂಚಾರ ನೀರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈ ಓವರ್ ಮೇಲೆ ಪಾರ್ಟಿ ಮಾಡಿದ ವಿಡಿಯೋ ವೈರಲ್; ರಾತ್ರಿ ಗಸ್ತಿಗೆ ಖಾಕಿ ಸಜ್ಜು

ಕಳೆದ ಮೂರು ವರ್ಷಗಳಿಂದ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಸ್ವಚ್ಛತಾ ನಿರ್ವಹವಣಾ ಗುತ್ತಿಗೆ ಸೇರಿ 4 ಟೆಂಡರ್​​ಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅವ್ಯವಹಾರ ನಡೆಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಅಧಿಕಾರಿಗಳ ಸಹಿ ನಕಲು ಮಾಡಿ ಬಿಎಂಟಿಸಿ ನಿಗಮಕ್ಕೆ ₹76.57 ಲಕ್ಷ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಬಿಎಂಟಿಸಿ ಬಸ್‌ ನಿಲ್ದಾಣಗಳ ಆವರಣದಲ್ಲಿ ಜಾಹೀರಾತು ನೀಡಿಕೆ, ಬ್ಯಾಂಕ್‌ ಎಟಿಎಂ ಘಟಕಗಳ ಜಾಗದ ಪರವಾನಗಿ ಅವಧಿ ವಿಸ್ತರಣೆ, ಬಿಎಂಟಿಸಿಯ ಫ್ಲ್ಯಾಟ್‌ಗಳ ಹಂಚಿಕೆಗೆ ಸಂಬಂಧಪಟ್ಟ ಕಡತಗಳಿಗೆ ತಪ್ಪಿತಸ್ಥ ಅಧಿಕಾರಿಗಳು ಸಂಸ್ಥೆಯ ಹಾಲಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶಕರ ಹೆಸರಿನಲ್ಲಿ ನಕಲಿ ಸಹಿ ಮಾಡಿ ವಂಚಿಸಿದ್ದಾರೆ. ಇದರಿಂದ ಸಂಸ್ಥೆಗೆ ಸಾಕಷ್ಟು ವಂಚನೆಯಾಗಿದೆ. ಅಧಿಕಾರಿಗಳ ಅಕ್ರಮವು ಈಗಾಗಲೇ ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ ಎಂದು ರಮ್ಯಾ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 31 July 23

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ