AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮನೆ ಮೇಲೆ ಉರುಳಿಬಿದ್ದ ಬೃಹತ್ ಮರ; ಮನೆಗಳಿಗೆ ನುಗ್ಗಿದ ನೀರು

ನಿನ್ನೆ ಸಂಜೆಯಿಂದ ಸುರಿದ ಭಾರೀ ಮಳೆಗೆ ತಡರಾತ್ರಿ ನಂದಿನಿಲೇಔಟ್ ಮುಖ್ಯರಸ್ತೆಯ 11 ನೇ ಕ್ರಾಸ್ ಬಳಿ‌ಯ ಮನೆ ಮೇಲೆ ಬೃಹತ್ ಮರ ಉರುಳಿಬಿದ್ದಿದೆ.

Karnataka Rain: ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಮನೆ ಮೇಲೆ ಉರುಳಿಬಿದ್ದ ಬೃಹತ್ ಮರ; ಮನೆಗಳಿಗೆ ನುಗ್ಗಿದ ನೀರು
ಬೆಂಗಳೂರು ಮಳೆ ಅವಾಂತರ
TV9 Web
| Edited By: |

Updated on:Aug 30, 2022 | 7:20 AM

Share

ಬೆಂಗಳೂರು: ನಿನ್ನೆ ಸಂಜೆಯಿಂದ ಸುರಿದ ಭಾರೀ ಮಳೆಗೆ ತಡರಾತ್ರಿ ನಂದಿನಿಲೇಔಟ್ ಮುಖ್ಯರಸ್ತೆಯ 11 ನೇ ಕ್ರಾಸ್ ಬಳಿ‌ಯ ಮನೆ ಮೇಲೆ ಬೃಹತ್ ಮರ ಉರುಳಿಬಿದ್ದಿದೆ. ಬೃಹತ್ ಮರ ಉರುಳಿದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬ ತುಂಡಾಗಿದೆ. ತುಂಡಾದ ವಿದ್ಯುತ್ ಕಂಬ ಮನೆ ಮೇಲೆ ವಾಲಿದೆ. ಮರ ಉರುಳಿಬಿದ್ದ ಮನೆ ಬಳಿಗೆ ಬಿಬಿಎಂಪಿ ಅರಣ್ಯ ಘಟಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್ ಕಂಬ ಉರುಳಿ ವಿದ್ಯುತ್ ಪ್ರವಹಿಸುತ್ತಿರುವ ಹಿನ್ನೆಲೆ, ಮನೆ ಮೇಲೆ ಬಿದ್ದಿರುವ ಮರ ತೆರವುಗೊಳಿಸಲು ಅಡ್ಡಿಯಾಗಿದೆ. ಮಲ್ಲೇಶ್ವರಂ ಮುಖ್ಯ ರಸ್ತೆಯಲ್ಲಿ ಫುಟ್ ಪಾತ್ ಮೇಲೆ ಬೃಹತ್ ಮರ ಉರುಳಿಬಿದ್ದಿದೆ. ಇದರಿಂದ ಗೌರಿ ಗಣೇಶ ಹಬ್ಬದ ಹಿನ್ನೆಲೆ ರೈತರು ಮಾರಾಟ ಮಾಡಲು ತಂದಿದ್ದ ಬಾಳೆಕಂದು, ಹಣ್ಣು-ಹಂಪಲು, ತಳಿರು ತೋರಣ ಮರದ ಕೆಳಗೆ ಸಿಲುಕಿ ಮಳೆ ನೀರು ಪಾಲಾಗಿವೆ.

ರಸ್ತೆ ಬದಿ ಫುಟ್ ಪಾತ್ ಕಾಮಗಾರಿಗೆ ಮಣ್ಣು ಅಗೆದಿರುವ ಹಿನ್ನೆಲೆ ಸತತ ಮಳೆಯಿಂದ ಮಣ್ಣು ಸಡಿಲಗೊಂಡು ಬೃಹತ್ ಮರ ಧರೆಶಾಹಿಯಾಗಿದೆ. ಯಶವಂತಪುರ ಮುಖ್ಯ ರಸ್ತೆ ಸಮೀಪ ಬೃಹತ್ ತಡರಾತ್ರಿ ಮರದ ಕೊಂಬೆ ಉರುಳಿಬಿದ್ದಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆ ಬಿಬಿಎಂಪಿ ಅರಣ್ಯ ಘಟಕ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.

ನಿನ್ನೆ ರಾತ್ರಿ ನಗರದಲ್ಲಿ ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ರಿಚ್ಮಂಡ್ ರಸ್ತೆಯಲ್ಲಿ ಒಂದು ಅಡಿಯಷ್ಟು ನೀರು ನಿಂತಿದೆ. ಬಿಳೇಕಹಳ್ಳಿ ಸಮೀಪದ ಅನುಗ್ರಹ ಲೇಔಟ್ ಪೂರ್ತಿ ನೀರು ನಿಂತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಲೇಔಟ್ ನಲ್ಲಿ ಮಳೆ ನೀರು ಸಂಗ್ರಹವಾಗಿ ಸಮಸ್ಯೆಯಾಗುತ್ತಿದೆ. ಯಶವಂತಪುರದ ಪೊಲೀಸ್ ಠಾಣೆ ರಸ್ತೆಗೆ ಅಡ್ಡಲಾಗಿ ಮರದ ಬೃಹತ್ ಕೊಂಬೆ ಬಿದ್ದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿಯಲ್ಲಿ ಕಳೆದ 1 ಗಂಟೆಯಿಂದ ಮಳೆ ಸುರಿಯುತ್ತಿರುವುದರಿಂದ ರಸ್ತೆಗಳು ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 7ರಲ್ಲಿ ವಾಹನಗಳು ಕೆಟ್ಟು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ತಗ್ಗುಪ್ರದೇಶದ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದ್ದರಿಂದ ಜನೆಉ ಪರದಾಡುತ್ತಿದ್ದಾರೆ.

ರಾತ್ರಿ ಸುರಿದ ಮಳೆಯಿಂದಾಗಿ ಬೊಮ್ಮನಹಳ್ಳಿಯ ಎರಡು ಬಡಾವಣೆಗಳು ಜಲಾವೃತಗೊಂಡಿವೆ. ಅಗ್ನಿಶಾಮಕ ಸಿಬ್ಬಂದಿ ನೀರು ಹೊರ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:57 am, Tue, 30 August 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ