AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಸಾಮಾನ್ಯವಾಗಿ ಪತ್ನಿಯರೇ ಪತಿಯ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡುವುದನ್ನು ಕೇಳಿದ್ದೇವೆ. ಗಂಡ ಟಾರ್ಚರ್ ಕೊಡುತ್ತಾನೆ ಹಾಗೇ ಹೀಗೆ ಎಂದು ಹೆಂಡತಿ ಪೊಲೀಸ್ ಮೆಟ್ಟಿಲೇರುವ ಸಾಕಷ್ಟು ಉದಾಹರಣೆಗಳಿವೆ. ಆದ್ರೆ, ಗಂಡನೇ ಪತ್ನಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡುವುದು ಅಪರೂಪದಲ್ಲಿ ಅಪರೂಪ. ಅಂತಹ ಅಪರೂಪದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ
ಪ್ರಾತಿನಿಧಿಕ ಚಿತ್ರImage Credit source: advocatetanwar.com
ರಮೇಶ್ ಬಿ. ಜವಳಗೇರಾ
|

Updated on: Mar 29, 2026 | 9:49 PM

Share

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ವಿವರಿಸಿದ್ದಾರೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಅಲ್ಲದೇ ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೇ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆ ಒಡವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ