Bengaluru Crime: ಪತ್ನಿಯನ್ನು ಕೊಂದು, ಪತಿ ನೇಣಿಗೆ ಶರಣು; ಬೆಂಗಳೂರಿನಲ್ಲಿ ದುರ್ಘಟನೆ

Bengaluru News: ಸಂಜೆಯಾದ್ರೂ ಮನೆ ಬಾಗಿಲು ತೆಗೆಯದಿದ್ದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

Bengaluru Crime: ಪತ್ನಿಯನ್ನು ಕೊಂದು, ಪತಿ ನೇಣಿಗೆ ಶರಣು; ಬೆಂಗಳೂರಿನಲ್ಲಿ ದುರ್ಘಟನೆ
ಸಾಂಕೇತಿಕ ಚಿತ್ರ

ಬೆಂಗಳೂರು: ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಪತಿ ನೇಣಿಗೆ ಶರಣಾದ ದುರ್ಘಟನೆ ಬೆಂಗಳೂರಿನ ತಿಗಳರಪಾಳ್ಯದ ಮನೆಯೊಂದರಲ್ಲಿ ನಡೆದಿದೆ. ಪತ್ನಿ ರೋಜಾ (28) ರನ್ನು ಕೊಂದು ಮಂಜುನಾಥ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮಕ್ಕಳಿರಲಿಲ್ಲ. ಕೌಟುಂಬಿಕ ಕಲಹದಿಂದ ಬೇಸತ್ತು ಮಂಜುನಾಥನಿಂದ ಕೃತ್ಯ ಎಸಗಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ ಮನೆಯಲ್ಲಿ ದಂಪತಿ ಗಲಾಟೆ ಮಾಡಿಕೊಂಡಿದ್ದರು. ಆ ಬಳಿಕ, ಸಂಜೆಯಾದ್ರೂ ಮನೆ ಬಾಗಿಲು ತೆಗೆಯದಿದ್ದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಚಿತ್ರದುರ್ಗ: ಕಾರು ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು
ಚಿತ್ರದುರ್ಗದ ಬುಡ್ನಹಟ್ಟಿ ಬಳಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಬುಡ್ನಹಟ್ಟಿ ಗ್ರಾಮದ ಗಂಗಾಧರಾಚಾರಿ (65) ಮೃತ ದುರ್ದೈವಿ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

ಇದನ್ನೂ ಓದಿ: ಕರ್ತವ್ಯನಿರತ ಕಾನ್​ಸ್ಟೇಬಲ್ ಮೇಲೆ ಕುಡುಕರಿಂದ ಹಲ್ಲೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Click on your DTH Provider to Add TV9 Kannada