AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯನ್ನೇ ಕೊಂದ ಪತ್ನಿ; ಪ್ರಿಯಕರ ನಾಗೇಶ್, ಅಣ್ಣ ನಾರಾಯಣಸ್ವಾಮಿ ಬಂಧನ

ಪತ್ನಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ನಾಟಕವಾಡಿದ್ದರು. ಹಣಕ್ಕಾಗಿ ಪ್ರಿಯಕರ ಮತ್ತು ಅಣ್ಣನ ಜೊತೆಗೂಡಿ ಕೊಲೆ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯನ್ನೇ ಕೊಂದ ಪತ್ನಿ; ಪ್ರಿಯಕರ ನಾಗೇಶ್, ಅಣ್ಣ ನಾರಾಯಣಸ್ವಾಮಿ ಬಂಧನ
ಪ್ರಿಯಕರ ನಾಗೇಶ್, ಅಣ್ಣ ನಾರಾಯಣಸ್ವಾಮಿ
TV9 Web
| Edited By: |

Updated on:Mar 29, 2022 | 2:42 PM

Share

ಬೆಂಗಳೂರು: ಇಲ್ಲಿನ ಜಕ್ಕಸಂದ್ರದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಕರ ನಾಗೇಶ್ ಮತ್ತು ಅಣ್ಣ ನಾರಾಯಣಸ್ವಾಮಿ ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಪತಿ ಹನುಮಯ್ಯ (29) ಎಂಬವರನ್ನು ಪತ್ನಿ ಭಾಗ್ಯಮ್ಮ ಹತ್ಯೆಗೈದಿದ್ದರು. ರಾತ್ರಿ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಬಳಿಕ ಪತ್ನಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ನಾಟಕವಾಡಿದ್ದರು. ಹಣಕ್ಕಾಗಿ ಪ್ರಿಯಕರ ಮತ್ತು ಅಣ್ಣನ ಜೊತೆಗೂಡಿ ಕೊಲೆ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ರೌಡಿಶೀಟರ್ ರಾಜು ಅಲಿಯಾಸ್ ಡಗಾರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರೋಡೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ಮಾರಕಾಸ್ತ್ರ ಸಮೇತ ಸಿಸಿಬಿ ಪೊಲೀಸರು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಸಾಗರ: ಇಲ್ಲಿನ ಪಟ್ಟಣದ ಗಣಪತಿ ಕೆರೆಯಲ್ಲಿ ವೈದ್ಯೆಯ ಶವ ಪತ್ತೆಯಾಗಿದೆ. ಸಾಗರ THO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶರ್ಮದಾ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹದಿಂದ ವೈದ್ಯೆ ಶರ್ಮದಾ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು: ಮೈಸೂರಿನಲ್ಲಿ ಬೀದಿ ನಾಯಿಗಳ ದಾಳಿಯಿಂದ ಬಾಲಕನಿಗೆ ಗಾಯವಾದ ಘಟನೆ ನಡೆದಿದೆ. ಸ್ಥಳೀಯರಿಂದ ಬಾಲಕ ಮೊಹಮ್ಮದ್ ಇಜಾನ್ ರಕ್ಷಣೆ ಮಾಡಲಾಗಿದೆ. ಗಾಯಾಳು ಮೊಹಮ್ಮದ್ ಇಜಾನ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ: ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಶಂಸುದ್ದೀನ್ ಸವಣೂರು, ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಜಿಲಾನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಷ್ಟೇ ಅಲ್ಲದೆ, ನ್ಯಾಯಾಲಯ ತಲಾ 1.50 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.

ಕೋಲಾರ: ಮಾಲೂರು ತಾಲೂಕಿನ ಬಳ್ಳೂರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಅಭಿಷೇಕ್ (13) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ಸಾವು ಪ್ರಕರಣ: ಪರೀಕ್ಷಾ ಕೇಂದ್ರ ಬದಲಾದ ಆತಂಕದಲ್ಲಿ ಕುಸಿದುಬಿದ್ದ ವಿದ್ಯಾರ್ಥಿನಿ ನಿಧನ

ಇದನ್ನೂ ಓದಿ: ಕತ್ತಲಲ್ಲಿ ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹತ್ತಿಸಿದ ಚಾಲಕ, ಮಗ ಸೊಸೆಯಿಂದ ರಕ್ಷಿಸುವಂತೆ ತಾಯಿ ಮನವಿ

Published On - 12:43 pm, Tue, 29 March 22

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್