AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ, ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು

ರಘು (28), ಪತ್ನಿ ತನುಶ್ರೀ (24) ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Crime News: ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ, ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 11, 2022 | 10:38 PM

Share

ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ದುರ್ಮರಣವನ್ನಪ್ಪಿದ ಘಟನೆ ಬೆಂಗಳೂರಿನ ಯಲಹಂಕ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮತ್ತೊಂದು ಕಡೆ, ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಯಲಹಂಕ‌ ರೈಲ್ವೆ ಸೇತುವೆ ಬಳಿ ನಡೆದಿದೆ. ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕನಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸವಾರನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉಡುಪಿ: ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ 2 ವಾಹನಕ್ಕೆ ಡಿಕ್ಕಿ

ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ 2 ವಾಹನಕ್ಕೆ ಡಿಕ್ಕಿ ಹೊಡೆದು, ವಾಹನ ಸವಾರ ಸಾರ್ವಜನಿಕರಿಂದ ಧರ್ಮದೇಟು ತಿಂದ ಘಟನೆ ಉಡುಪಿ ನಗರದ ಕೃಷ್ಣ ಮಠದ ಸಮೀಪ ನಡೆದಿದೆ. ಬೆಂಗಳೂರು ಮೂಲದ ಯುವಕರಿಂದ ಕುಡಿದು ಅವಾಂತರ ಸೃಷ್ಟಿಯಾಗಿದೆ. ತಾಯಿ, ಮಗು ಭಾರಿ ಅಪಘಾತದಿಂದ ಸ್ಪಲ್ಪದರಲ್ಲೇ ಪಾರಾಗಿದ್ದಾರೆ. ಸ್ಥಳಕ್ಕೆ ಉಡುಪಿ ನಗರ ಠಾಣೆ ಹೊಯ್ಸಳ ಪೊಲೀಸರು ಭೇಟಿ ನೀಡಿದ್ದಾರೆ.

ತುಮಕೂರು: ನಾಪತ್ತೆಯಾಗಿದ್ದ ಉಪನ್ಯಾಸಕ ಸೋಮಶೇಖರ್​ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಉಪನ್ಯಾಸಕ ಸೋಮಶೇಖರ್​ ಶವವಾಗಿ ಪತ್ತೆ ಆಗಿದ್ದಾರೆ. ಕುಂದರನಹಳ್ಳಿ ಬಳಿ ಹೇಮಾವತಿ ನಾಲೆಯಲ್ಲಿ ಮೃತದೇಹ ಪತ್ತೆ ಆಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕುಂದರನಹಳ್ಳಿ ಗ್ರಾಮದಲ್ಲಿ ಮೃತ ಉಪನ್ಯಾಸಕ ಶವ ಪತ್ತೆಯಾಗಿದೆ. ಕಳೆದ ಮೂರು ದಿನದಿಂದ ನಾಪತ್ತೆಯಾಗಿದ್ದ ಸೋಮಶೇಖರ್​, ಚಿಕ್ಕನಾಯಕನಹಳ್ಳಿಯಿಂದ ನಾಪತ್ತೆಯಾಗಿದ್ದರು. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಂಡ್ಯ: ಗಂಗವಾಡಿಯಲ್ಲಿ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ

ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. 1 ವರ್ಷದ ಹೆಣ್ಣು ಮಗುವಿಗೆ ವಿಷವುಣಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಘು (28), ಪತ್ನಿ ತನುಶ್ರೀ (24) ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ: ಲಂಚಕ್ಕೆ ಬೇಡಿಕೆ ಆರೋಪ; ಗ್ರಾ.ಪಂ. ಪಿಡಿಒ ಎಸಿಬಿ ಬಲೆಗೆ

ಇ ಸ್ವತ್ತಿನ ಆಸ್ತಿ ಖರೀದಿ ಪತ್ರ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಆರೋಪದಡಿ 70 ಸಾವಿರ ಲಂಚ ಪಡೆಯುತ್ತಿದ್ದ ಗ್ರಾ.ಪಂ. ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದಾನೆ. ಬಿಳಕಿ ಗ್ರಾ.ಪಂ. ಪಿಡಿಒ ಡಿ.ಕೇಶವಮೂರ್ತಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾ.ಪಂ. ಪಿಡಿಒ ಸಿಕ್ಕಿಬಿದ್ದಿದ್ದು ಶಿವಮೊಗ್ಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೋಲಾರ: ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು

ತಾಲೂಕಿನ ಹೋಳೂರು ಗ್ರಾಮದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರು ಸಿಕ್ಕಿಬಿದ್ದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗ್ರಾಮದ ಮಮತಾ ಎಂಬುವರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದರು. ಸಿಕ್ಕಿಬಿದ್ದ ಮಹಿಳೆಯರನ್ನು ಗ್ರಾಮಾಂತರ ಠಾಣೆ ಪೊಲೀಸರಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ.

ಹಾಸನ: ಯುವತಿ ಜತೆ ಯುವಕನ ಅಸಭ್ಯ ವರ್ತನೆ ಆರೋಪ; ಯುವಕನನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಸ್ಥಳೀಯರು

ಯುವತಿ ಜತೆ ಯುವಕನ ಅಸಭ್ಯ ವರ್ತನೆ ಆರೋಪದಲ್ಲಿ ಸ್ಥಳೀಯರು ಯುವಕನನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ಯುವತಿಯನ್ನ ಹಿಡಿದು ಎಳೆದಾಡುತ್ತಿದ್ದ ಆರೋಪದಲ್ಲಿ ಯುವಕನನ್ನ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಜನರು ಆರೋಪಿಯನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

ಬೆಳಗಾವಿ: MES​ ಪುಂಡರ ಮುಖಕ್ಕೆ ಮಸಿ ಬಳಿದ ಪ್ರಕರಣ; ನಾಲ್ವರ ಬಿಡುಗಡೆ

ಬೆಳಗಾವಿಯಲ್ಲಿ MES​ ಪುಂಡರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಲ್ವರು ಬಿಡುಗಡೆ ಆಗಿದ್ದಾರೆ. ಸಂಪತ್‌ಕುಮಾರ್ ದೇಸಾಯಿ ಹಾಗೂ ಅನಿಲ್ ದಡ್ಡಿಮ‌ನಿ, ಸಚಿನ್ ಮಠದ, ರಾಹುಲ್ ಕಲಕಾಂಬಕರ್ ಬಿಡುಗಡೆ ಆಗಿದ್ದಾರೆ. ಬಿಡುಗಡೆಯಾದ ಕನ್ನಡಪರ ಹೋರಾಟಗಾರರಿಗೆ ಸನ್ಮಾನ ಮಾಡಲಾಗಿದೆ. ಹೋರಾಟಗಾರರಿಗೆ ಕರ್ನಾಟಕ ನವನಿರ್ಮಾಣ ಸೇನೆ ರಾಜ್ಯಾಧ್ಯಕ್ಷ, ಭೀಮಾಶಂಕರ ಪಾಟೀಲ್‌ ಸನ್ಮಾನ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಆದವರು ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ MES ಅಧಿವೇಶನ ನಡೆಯುತ್ತಿದ್ದದ್ದನ್ನ ವಿರೋಧಿಸಿ ಮಹಾಮೇಳ‌ ಸ್ಥಳಕ್ಕೆ ನುಗ್ಗಿ MES ಅಧ್ಯಕ್ಷನ ಮುಖಕ್ಕೆ ಮಸಿ ಬಳಿದಿದ್ದರು.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

ಇದನ್ನೂ ಓದಿ: Video: ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ಸಹಾಯ ಮಾಡಿದ ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ

Published On - 10:38 pm, Tue, 11 January 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?