ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣ; ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್
ದಂಪತಿ ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಹರೀಶ್ ಅಂಗವಿಕಲರಾಗಿದ್ದಾರೆ. ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಈ ಅಪಘಾತ ಸಂಭವಿಸಿದೆ. ಬಿಡದಿ ಮೂಲದ 40 ವರ್ಷ ವಯಸ್ಸಿನ ಹರೀಶ್ ಹಾಗೂ 30 ವರ್ಷದ ಮಂಗಳಾ ಮೃತರು. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
ದಂಪತಿ ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಹರೀಶ್ ಅಂಗವಿಕಲರಾಗಿದ್ದಾರೆ. ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವ್ಹೀಲಿಂಗ್ನಲ್ಲಿ ತೊಡಗಿದ್ದ ಐವರ ಸೆರೆ ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.
ಯುವಜನರು ದ್ವಿಚಕ್ರ ವಾಹನಗಳನ್ನು ಹಿಡಿದು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು, ವ್ಹೀಲಿಂಗ್ ನಡೆಸುವುದು ಕೆಲವೆಡೆ ಕಂಡುಬಂದಿತ್ತು. ವಾರಾಂತ್ಯಗಳಲ್ಲಿ, ಫ್ಲೈ ಓವರ್ ರಸ್ತೆ ಮೇಲೆ, ಅಷ್ಟೇ ಅಲ್ಲದೆ ಸಹಜ ಟ್ರಾಫಿಕ್ ಇರುವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲೂ ಹೀಗೆ ಕೆಲ ಯುವಕರು ಬೇಜಾವಾಬ್ದಾರಿಯುತ ನಡವಳಿಕೆ ತೋರುತ್ತಿದ್ದರು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ: Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್
(Husband Wife Death while Crossing Railway Track Train Accident in Bengaluru)
Published On - 8:18 pm, Sun, 25 July 21