Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ

ಕಾರಿನಲ್ಲಿ ಹೋಗುತ್ತಿದ್ದಾಗ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದು, ಈ ವೇಳೆ ಕಾರು ಪಲ್ಟಿಯಾದ ಘಟನೆ ಬೆಂಗಳೂರಿನ ಹಲಸೂರು ಗೇಟ್​​ ಠಾಣೆ ಬಳಿ ತಡರಾತ್ರಿ ನಡೆದಿದೆ.

Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ
ಕಾರು ಪಲ್ಟಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 7:53 AM

ಬೆಂಗಳೂರು: ಕಾರಿನಲ್ಲಿ ಹೋಗುತ್ತಿದ್ದಾಗ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದು, ಈ ವೇಳೆ ಕಾರು ಪಲ್ಟಿಯಾದ(Car Overturned) ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್​​​ ಠಾಣೆ(Halasuru Gate Police Station) ಬಳಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್​​​ ಕಾರಿನಲ್ಲಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮಾರ್ಕೆಟ್​ ಕಡೆಯಿಂದ ದಂಪತಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದಾಳೆ.

ಸ್ಟೇರಿಂಗ್ ಎಳೆದ ರಭಸಕ್ಕೆ ಪಲ್ಟಿಯಾದ ಕಾರು

ಸ್ಟೇರಿಂಗ್ ಎಳೆದ ರಭಸಕ್ಕೆ ರಸ್ತೆಯಲ್ಲಿಯೇ ಕಾರು ಪಲ್ಟಿ ಹೊಡೆದಿದೆ. ಕೂಡಲೇ ದಂಪತಿಯನ್ನು ಹಲಸೂರು ಗೇಟ್​​ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮದ್ಯ ಸೇವಿಸಿ ಕಾರು ಚಲಾಯಿಸಿರುವ ಅನುಮಾನ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ

ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿ ಶುರುವಾದಾಗಿನಿಂದ ಅಪಘಾತ ಸಂಖ್ಯೆಗಳು ಮೀತಿಮೀರಿದೆ. ಅಷ್ಟೇ ಅಲ್ಲ ಕಳ್ಳತನ ಪ್ರಕರಣಗಳು ಕೇಳಿಬರುತ್ತಿದೆ. ಇದಕ್ಕೋಸ್ಕರ ಪೊಲೀಸರು ಇತ್ತೀಚೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವವರು ನಿಗದಿತ ವೇಗಮೀತಿಗಿಂತ ಹೆಚ್ಚಾಗಿ ಚಾಲನೆ ಮಾಡುವಂತಿಲ್ಲ ಎಂದಿದ್ದರು. ಜೊತೆಗೆ ಸ್ಪೀಡಾಗಿ ಚಾಲನೆ ಮಾಡಿದ್ದ ವಾಹನಗಳಿಗೆ ಫೈನ್​ ಕೂಡ ಹಾಕಿದ್ದರು. ಈ ಮೂಲಕ ಅಪಘಾತಕ್ಕೆ ತಡೆ ಹಾಕಲು ಪ್ರಯತ್ನಿಸಿದ್ದರು. ಆದರೀಗ ಹೆದ್ದಾರಿಯ ಬಿಡದಿ ಬಳಿಯ ನೆಲ್ಲಿಗುಂಟಕೆರೆ ಬಳಿ ಲಾರಿ , ಬಸ್ಸು, ಕಾರು ಒಂದೊಕ್ಕೊಂದು ಗುದ್ದಿಕೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ