ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಹೈಡ್ರಾಮಾ: ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟ ಪೊಲೀಸ್ ಸಿಬ್ಬಂದಿ
ಚಾಮರಾಜಪೇಟೆ ಮೈದಾನದಲ್ಲಿ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಬಿಬಿಎಂಪಿಗೆ ಸ್ಥಳೀಯ ಪೊಲೀಸ್ ಠಾಣಾ ಪೊಲೀಸರು ಮನವಿ ಮಾಡಿದ್ದರು.
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್, ಆಜಾನ್, ಮಂದಿರ ವರ್ಸಸ್ ಮಸೀದಿ ಹೀಗೆ ಒಂದಲ್ಲ ಒಂದು ವಿವಾದಗಳು ಹುಟ್ಟಿಕೊಂಡಿದ್ದವು. ಅದರ ಬೆನ್ನಲೆ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಕೂಡ ಭುಗಿಲೆದಿದ್ದು, ಚಾಮರಾಜಪೇಟೆ ಮೈದಾನದಲ್ಲಿ ಹೈಡ್ರಾಮಾವೇ ನಡೆದಿದೆ. ಮೈದಾನದಲ್ಲಿ ಸ್ಥಳೀಯ ಹಿಂದೂ, ಮುಸ್ಲಿಮರು ಜಮಾವಣೆಗೊಂಡಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬಿಬಿಎಂಪಿ ಸಹಕಾರದಲ್ಲಿ ಸಿಸಿಕ್ಯಾಮರಾ ಅಳವಡಿಕೆ ಕೆಲಸವಾಗುತ್ತಿದೆ. ಜೆಸಿಬಿ ಕೆಲಸಕ್ಕೆ ಅವಕಾಶ ನೀಡಲ್ಲ ಎಂದು ಹಿಂದೂಗಳು ಹೇಳುತ್ತಿದ್ದಾರೆ. ವರ್ಕ್ ಆರ್ಡರ್ ಎಲ್ಲದೆ ಹೇಗೆ ಕಾಮಗಾರಿ ನಡೆಸುತ್ತಿದ್ದೀರಿ. ಸಿಸಿಕ್ಯಾಮರಾ ಅಳವಡಿಕೆಗೆ ಬಿಡಲ್ಲ ಎಂದು ಹಿಂದೂಗಳು ವಾದ ಮಾಡುತ್ತಿದ್ದಾರೆ. ಸ್ಥಳೀಯ ಹಿಂದೂಗಳು, ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಕೂಡಲೇ ಕೆಲಸ ನಿಲ್ಲಿಸುವಂತೆ ಮೈದಾನಕ್ಕೆ ಹಿಂದೂಗಳು ನುಗ್ಗಿದ್ದಾರೆ. ಚಾಮರಾಜಪೇಟೆ ಮೈದಾನದಲ್ಲಿ ಸಿಸಿಕ್ಯಾಮರಾ ಹಾಕುವುದು ಬೇಡ. ಕೂಡಲೇ ಕೆಲಸ ನಿಲ್ಲಿಸಿ ಎಂದು ಪೊಲೀಸರಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳೀಯರನ್ನು ಖಾಲಿ ಮಾಡಿಸಲು ಪೊಲೀಸರ ಹರಸಾಹಸ ಪಟ್ಟಿದ್ದು, ಯಾವುದೇ ಕಾರಣಕ್ಕೂ ನಾವು ಇಲ್ಲಿಂದ ಹೋಗಲ್ಲವೆಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ; ಕುಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸುವುದು ತನ್ನ ಸಂಕಲ್ಪ ಎಂದರು ಜಗ್ಗೇಶ್
ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮರಾಗಳ ಅಳವಡಿಕೆ
ಚಾಮರಾಜಪೇಟೆ ಮೈದಾನದಲ್ಲಿ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಬಿಬಿಎಂಪಿಗೆ ಸ್ಥಳೀಯ ಪೊಲೀಸ್ ಠಾಣಾ ಪೊಲೀಸರು ಮನವಿ ಮಾಡಿದ್ದರು. ಇದರನ್ವಯ ಇಂದು ಬೆಳಗ್ಗೆ ಸಿಬ್ಬಂದಿಗಳು ಕಾರ್ಯಚರಣೆ ಆರಂಭಿಸಿದ್ದರು. ಸಿಸಿ ಕ್ಯಾಮರಾಗಳ ಅಳವಡಿಕೆಗೆ ಬಿಬಿಎಂಬಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಮೌಕಿಕ ಆದೇಶ ನೀಡಿದ್ದರು. ಮೌಕಿಕ ಆದೇಶದ ಮಾಹಿತಿ ನೀಡಿದ್ದರಿಂದ ಈ ಗೊಂದಲವಾಗಿದೆ. ಪತ್ರದ ಮೂಲಕ ಸಿಸಿ ಕ್ಯಾಮರಾ ಅಳವಡಿಕೆಗೆ ಯಾವುದೇ ಆದೇಶ ಆಗಿಲ್ಲ.
ಈದ್ಗಾ ಮೈದಾನದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಮೈದಾನದಲ್ಲಿ ಸಿಸಿಕ್ಯಾಮರಾ ಅಳವಡಿಸಿಲು ಬಿಬಿಎಂಪಿ ಮುಂದಾಗಿದ್ದು, ಗಲಭೆ ನಡೆಯುವ ಮುನ್ನವೇ ಎಚ್ಚೆತ್ತುಕೊಂಡು ಸ್ಥಳದಲ್ಲಿ ಭದ್ರತೆಗೆ ಮುಂದಾಗಿದೆ. ಪೊಲೀಸ್ ಇಲಾಖೆ ಮನವಿ ಮೇರೆಗೆ ಸಿಸಿಕ್ಯಾಮರಾ ಅಳವಡಿಕೆ ಮಾಡಲಾಗುತ್ತಿದೆ. ಈದ್ಗಾ ಗೋಡೆಯ ಸುತ್ತ ಒಟ್ಟು 8 ಸಿಸಿಕ್ಯಾಮರಾಗಳು, ಮೈದಾನದಲ್ಲಿ ಒಟ್ಟು 12ಕ್ಕೂ ಹೆಚ್ಚು ಸಿಸಿಕ್ಯಾಮರಾಗಳ ಅಳವಡಿಕೆ ಮಾಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸ್ಥಳೀಯ ಪೊಲೀಸರಿಂದ ಮೈದಾನದಲ್ಲಿ ಭದ್ರತೆ ಮುಂದುವರಿದಿದೆ. 50ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈದ್ಗಾ ಮೈದಾನದಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಸದ್ಯ ಸೂಕ್ಷ್ಮ ಪ್ರದೇಶವಾಗಿರುವ ಕಾರಣ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಇನ್ನೆರಡು ದಿನಗಳಲ್ಲಿ ಸಿಸಿಕ್ಯಾಮರಾ ಅಳವಡಿಕೆ ಕಾರ್ಯ ಅಂತ್ಯವಾಗಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.