AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ಕಲೆಕ್ಷನ್ ಸೆಂಟರ್ ಅಂದಿದ್ದಕ್ಕೆ ನನಗೆ ವರ್ಗಾವಣೆಯ ಬೆದರಿಕೆ! ನಾನು ಶುದ್ಧ ಹಸ್ತ, ಯಾವುದಕ್ಕೂ ಜಗ್ಗುವುದಿಲ್ಲ- ನ್ಯಾ. ಸಂದೇಶ್

ಕಳೆದ ವಾರ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ಎಸಿಬಿ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದವರಿಗೂ ಬಿ ರಿಪೋರ್ಟ್ ಹಾಕುತ್ತಿದೆ. ಇಲ್ಲಿಯವರೆಗೆ ಸಲ್ಲಿಸಿರುವ ಅಂತಿಮ ವರದಿಗಳ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು.

ಎಸಿಬಿ ಕಲೆಕ್ಷನ್ ಸೆಂಟರ್ ಅಂದಿದ್ದಕ್ಕೆ ನನಗೆ ವರ್ಗಾವಣೆಯ ಬೆದರಿಕೆ! ನಾನು ಶುದ್ಧ ಹಸ್ತ, ಯಾವುದಕ್ಕೂ ಜಗ್ಗುವುದಿಲ್ಲ- ನ್ಯಾ. ಸಂದೇಶ್
ನ್ಯಾ. ಸಂದೇಶ್
TV9 Web
| Edited By: |

Updated on:Jul 04, 2022 | 3:57 PM

Share

ಬೆಂಗಳೂರು: ಎಸಿಬಿ(ACB) ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್(HP Sandesh) ರಿಗೆ ವರ್ಗಾವಣೆಯ ಬೆದರಿಕೆ ಹಾಕಲಾಗಿದೆ. ಬೆಂಗಳೂರು ನಗರ ಡಿಸಿ ಕಚೇರಿಯ ಭ್ರಷ್ಟಾಚಾರ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸ್ತಿರೋ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ರವರೇ ಈ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ನಾನು ವರ್ಗಾವಣೆ ಬೆದರಿಕೆ ಎದುರಿಸಲು ಸಿದ್ದನಿದ್ದೇನೆ. ಜನರ ಒಳಿತಿಗಾಗಿ ಅದಕ್ಕೂ ಸಿದ್ದನಿದ್ದೇನೆ. ನಿಮ್ಮ ಎಸಿಬಿ ಎಡಿಜಿಪಿ ತುಂಬಾ ಪವರ್ ಫುಲ್ ಆಗಿದ್ದಾರಂತೆ. ಓರ್ವ ವ್ಯಕ್ತಿ ಇದನ್ನು ನನ್ನ ಸಹ ನ್ಯಾಯಮೂರ್ತಿಗೆ ಹೇಳಿದ್ದಾರಂತೆ. ಇದನ್ನು ಸಹ ನ್ಯಾಯಮೂರ್ತಿಯೊಬ್ಬರೇ ನನಗೆ ತಿಳಿಸಿದ್ದಾರೆ. ವರ್ಗಾವಣೆ ಮಾಡಿಸುವ ಬೆದರಿಕೆಯನ್ನೂ ಆದೇಶದಲ್ಲಿ ಬರೆಸುತ್ತೇನೆ. ನನಗೆ ಯಾರ ಹೆದರಿಕೆ ಇಲ್ಲ, ಬೆಕ್ಕಿಗೆ ಗಂಟೆ ಕಟ್ಟಲು ಸಿದ್ದನಿದ್ದೇನೆ. ಜಡ್ಜ್ ಆದ ಮೇಲೆ ನಾನು ಒಂದಿಂಚೂ ಆಸ್ತಿ ಮಾಡಿಲ್ಲ. ನನ್ನ ಜಡ್ಜ್ ಹುದ್ದೆ ಹೋದರೂ ಚಿಂತೆ ಮಾಡುವುದಿಲ್ಲ. ನಾನು ರೈತನ ಮಗ, ಭೂಮಿ ಉಳುಮೆ ಮಾಡಲೂ ಸಿದ್ದನಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿಲ್ಲ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೂ ಬದ್ದನಾಗಿಲ್ಲ ಎಂದೂ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಸ್ಪಷ್ಟಪಡಿಸಿದ್ದಾರೆ.

ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ ಕಳೆದ ವಾರ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ಎಸಿಬಿ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದವರಿಗೂ ಬಿ ರಿಪೋರ್ಟ್ ಹಾಕುತ್ತಿದೆ. ಇಲ್ಲಿಯವರೆಗೆ ಸಲ್ಲಿಸಿರುವ ಅಂತಿಮ ವರದಿಗಳ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೂ ಸರ್ಕಾರ ಮಾಹಿತಿಯನ್ನು ಒದಗಿಸದೇ, ವಿಭಾಗೀಯ ಪೀಠಕ್ಕೆ ನೀಡಲಾಗಿದೆ ಎಂದು ಸಬೂಬು ನೀಡಿದ್ದಕ್ಕೆ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಎಸಿಬಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಸಿ ಕಚೇರಿಯಲ್ಲಿ ಕಲೆಕ್ಷನ್ ಗೋಸ್ಕರವೇ ಗುತ್ತಿಗೆ ಆಧಾರದಲ್ಲಿ 2ನೇ ಆರೋಪಿಯನ್ನು ನೇಮಿಸಲಾಗಿದೆ. ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದವರಿಗೂ ಬಿ ರಿಪೋರ್ಟ್ ಹಾಕುತ್ತಿದ್ದೀರಿ. ವಿಭಾಗೀಯ ಪೀಠಕ್ಕೆ ನೀಡಿದ ಮಾಹಿತಿ ನನಗೇಕೆ ನೀಡುತ್ತಿಲ್ಲ. ನೀವು ಸಾರ್ವಜನಿಕರನ್ನು ರಕ್ಷಿಸುತ್ತಿದ್ದೀರಾ ಅಥವಾ ಕಳಂಕಿತರನ್ನು ರಕ್ಷಿಸುತ್ತಿದ್ದೀರಾ. ಕರಿ ಕೋಟ್ ಇರುವುದು ಆರೋಪಿಗಳನ್ನು ರಕ್ಷಿಸಲಿಕ್ಕಲ್ಲ. ಭ್ರಷ್ಟಾಚಾರ ಕ್ಯಾನ್ಸರ್ ಆಗಿದೆ. ಈ ಕ್ಯಾನ್ಸರ್ 4ನೇ ಹಂತಕ್ಕೆ ಹೋಗಬಾರದು. ಸರ್ಚ್ ವಾರೆಂಟ್ ತೋರಿಸಿ ಅಧಿಕಾರಿಗಳಿಂದ ವಸೂಲಿ ಮಾಡೋದು ನಡೀತಿದೆ. ಬೇಲಿಯೇ ಎದ್ದು ಹೊಲ ಮೇಯ್ದರೆ ನಾವೇನು ಮಾಡುವುದು. ಇದನ್ನೂ ಓದಿ: ಭಾರತಕ್ಕೆ ಬಂದಿದೆ ಒನ್​ಪ್ಲಸ್ 50 ಇಂಚಿನ Y1S ಪ್ರೊ ಟಿವಿ: ಫೀಚರ್ಸ್​ ನೋಡಿದ್ರೆ ಫಿದಾ ಆಗ್ತೀರಾ

ಎಸಿಬಿಯ ಎಡಿಜಿಪಿ ಸರ್ವಿಸ್ ರೆಕಾರ್ಡ್ ಅನ್ನೂ ಈವರೆಗೆ ಹಾಜರುಪಡಿಸಿಲ್ಲ. ನ್ಯಾಯಮೂರ್ತಿಗೇ ವರ್ಗಾವಣೆ ಬೆದರಿಕೆ ಹಾಕುವ ಹಂತಕ್ಕೆ ತಲುಪಿದ್ದೀರಿ. ವರ್ಗಾವಣೆ ಮಾಡಿಸುವ ಬೆದರಿಕೆಯನ್ನೂ ಆದೇಶದಲ್ಲಿ ಬರೆಸುತ್ತೇನೆ. ನನಗೆ ಯಾರ ಹೆದರಿಕೆ ಇಲ್ಲ, ಬೆಕ್ಕಿಗೆ ಗಂಟೆ ಕಟ್ಟಲು ಸಿದ್ದನಿದ್ದೇನೆ. ಜಡ್ಜ್ ಆದ ಮೇಲೆ ನಾನು ಒಂದಿಂಚೂ ಆಸ್ತಿ ಮಾಡಿಲ್ಲ. ನನ್ನ ಜಡ್ಜ್ ಹುದ್ದೆ ಹೋದರೂ ಚಿಂತೆ ಮಾಡುವುದಿಲ್ಲ. ನಾನು ರೈತನ ಮಗ, ಭೂಮಿ ಉಳುಮೆ ಮಾಡಲೂ ಸಿದ್ದನಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿಲ್ಲ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೂ ಬದ್ದನಾಗಿಲ್ಲ. ಭ್ರಷ್ಟಾಚಾರದಲ್ಲಿ ಇಡೀ ರಾಜ್ಯವೇ ಹತ್ತಿ ಉರಿಯುತ್ತಿದೆ. ಎಸಿಬಿ ಏನು ಮಾಡುತ್ತಿದೆ. ಬಿ ರಿಪೋರ್ಟ್ ಮಾಹಿತಿ ಬಹಿರಂಗಪಡಿಸಲು ಹಿಂಜರಿಕೆ ಏಕೆ? ವಿಟಮಿನ್ ಎಂ ಇದ್ದರೆ ಎಲ್ಲರನ್ನೂ ರಕ್ಷಿಸುತ್ತೀರಿ. ದುಡ್ಡು ತಗೊಂಡು ಪೋಸ್ಟಿಂಗ್ ಕೊಡೋದು ನಿಲ್ಲಿಸಿದರೆ ಎಲ್ಲ ಸರಿಹೋಗುತ್ತದೆ. ಎಂದು ಎಸಿಬಿ ವಿರುದ್ಧ ಹೈಕೋರ್ಟ್ ನ್ಯಾ.ಹೆಚ್.ಪಿ.ಸಂದೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿರುವ ಹೈಕೋರ್ಟ್ ಡಿಪಿಎಆರ್ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.

Published On - 2:43 pm, Mon, 4 July 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ