ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಡಿ.ಕೆ.ಶಿವಕುಮಾರ್‌

ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂಬ ಗಂಭೀರ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಸಮರ್ಥನೆ ನೀಡಿದ್ದಾರೆ.

ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಡಿ.ಕೆ.ಶಿವಕುಮಾರ್‌
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 15, 2022 | 6:13 PM

ಬೆಂಗಳೂರು: ರಾಜ್ಯದಲ್ಲಿ ತೀರ್ವ ಆತಂಕ ಮೂಡಿಸಿದ್ದ ಮಂಗಳೂರು ಕುಕ್ಕರ್​ ಬಾಂಬ್​​ ಸ್ಫೋಟ್​ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ. ಇಂದು (ಡಿ.15) ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂದು ಗಂಭೀರ ಆರೋಪ ಮಾಡಿದರು. ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು. ಎಲ್ಲಿಂದ ಭಯೋತ್ಪಾದಕರು ಬಂದು ಬ್ಲಾಸ್ಟ್ ಮಾಡಿದರು? ಡಿಜಿ ಆತುರದಲ್ಲಿ ಭಯೋತ್ಪಾದಕ ಕೃತ್ಯ ಎಂದರು. ಕೇವಲ ವಿಚಾರ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕುಕ್ಕರ್ ಬ್ಲಾಸ್ಟ್ ಪೂರ್ವನಿಯೋಜಿತ ಎಂದು ಹೇಗೆ ಹೇಳುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು ಎಂದು ಪ್ರಶ್ನಿಸಿದರು. ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ ಎಂದರು.

ಇದನ್ನೂ ಓದಿ: ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣದ ಬಗ್ಗೆ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರ: ಸರಣಿ ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ ಬಿಜೆಪಿ

ಮತದಾನದ ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ. ಹಾಗಾದರೆ ಡಿ.ಕೆ.ಶಿವಕುಮಾರ್‌ ಅವರಿಗೆ ಕುಕ್ಕರ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನ ಮೇಲೆ ಏಕೆ ಸಿಂಪತಿ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇವೆಲ್ಲದರ ನಡುವೆ ಸದ್ಯ ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ.

ನಾನು ಯಾರಿಗೂ ಕ್ಷಮೆ ಕೇಳುವುದಿಲ್ಲ. ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ. ಅದೊಂದು ಇನ್ಸಿಡೆಂಟ್ ಆಗಿದೆ, ಅದಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ ಅದನ್ನು ವೈಭವೀಕರಿಸಿದ ರೀತಿ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ನಿಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಅಧಿಕಾರಿಗಳನ್ನು ಬಳಸಿಕೊಂಡರು. ನಾನು ಯಾವ ಟೆರರಿಸ್ಟ್‌ಗೂ ಬೆಂಬಲ ನೀಡಲ್ಲ. ಭ್ರಷ್ಟಾಚಾರವನ್ನು ಮಾಧ್ಯಮಗಳು ತುಂಬಾ ಚೆನ್ನಾಗಿ ತೋರಿಸುತ್ತಿದ್ದವು. ಮಾಧ್ಯಮಗಳನ್ನು ಡೈವರ್ಟ್‌ ಮಾಡಲು ಸ್ಫೋಟ ಪ್ರಕರಣ ಬಳಸಿಕೊಂಡ್ರು ಎಂದು ಹೇಳಿದರು.

ಟೆರರಿಸ್ಟ್‌ ಅಟ್ಯಾಕ್‌ನಿಂದ ನಮ್ಮ ನಾಯಕರನ್ನೇ ಕಳೆದುಕೊಂಡವರು ನಾವು. ಇದರ ನೋವು ಏನು ಅನ್ನೋದು ನಮಗೆ ಗೊತ್ತಿದೆ. ಯಾವುದೇ ತನಿಖೆ ಮಾಡದೆಯೇ ಉಗ್ರ ಚಟುವಟಿಕೆ ಅಂತ ಹೇಳಿದ್ದೀರಿ. ತನಿಖೆ ಮಾಡುವ ಮೊದಲೇ ನಿಮಗೆ ಹೇಗೆ ಗೊತ್ತಾಯ್ತು ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:13 pm, Thu, 15 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್