ನನ್ನ ಮರ್ಡರ್ ಮಾಡ್ತಾರಾ ಮಾಡಲಿ, ಇತಂವರನ್ನ ನಾನು ತುಂಬಾ ನೋಡಿದ್ದೇನೆ: ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ

| Updated By: ವಿವೇಕ ಬಿರಾದಾರ

Updated on: Aug 24, 2022 | 4:34 PM

ನನ್ನ ಮರ್ಡರ್ ಮಾಡ್ತಾರಾ ಮಾಡಲಿ 82 ವರ್ಷಾ ಆಗಿದೆ. ನಾನು ಯಾವುದಕ್ಕೂ ಹೆದರಲ್ಲ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

ನನ್ನ ಮರ್ಡರ್ ಮಾಡ್ತಾರಾ ಮಾಡಲಿ, ಇತಂವರನ್ನ ನಾನು ತುಂಬಾ ನೋಡಿದ್ದೇನೆ: ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
Follow us on

ಬೆಂಗಳೂರು: ನನ್ನ ಮರ್ಡರ್ (Murder) ಮಾಡ್ತಾರಾ ಮಾಡಲಿ 82 ವರ್ಷಾ ಆಗಿದೆ. ನಾನು ಯಾವುದಕ್ಕೂ ಹೆದರಲ್ಲ ಎಂದು ಗುತ್ತಿಗೆದಾರ ಸಂಘದ (Contractor Association) ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಕೆಂಪಣ್ಣ ಅವರಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಮಾತನಾಡಿದ ಅವರು ಇತಂವರನ್ನು ನಾನು ತುಂಬಾ ನೋಡಿದ್ದೇನೆ. ದೇಶವನ್ನೆ ನುಂಗಿ ನೀರು ಕುಡಿಯುತ್ತಿದ್ದಾರೆ ಅವರನ್ನ ಬಿಟ್ಟು ನಮ್ಮನ್ನ ಟಾರ್ಗೆಟ್ ಮಾಡಿದರೆ ಮಾಡಲಿ ಎಂದರು.

ಘಟನೆ ಹಿನ್ನೆಲೆ

ಕರ್ನಾಟಕ ಸರ್ಕಾರದ ಆಡಳಿತದ ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆಯಲು ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ, ಶತ್ರು ಎಂದಿರುವ ಮೋದಿ ಅವರ ಮಾತನ್ನೇ ಉಲ್ಲೇಖಿಸಿ‌ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅಭಿನಂದನೆ ಪತ್ರ ಬರೆದಿದ್ದಾರೆ.

ಗುತ್ತಿಗೆದಾರರು ದೂರು ನೀಡಿ ಒಂದೂವರೆ ವರ್ಷವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೆಂಪಣ್ಣ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಮತ್ತೆ ಮುಂಚೂಣಿಗೆ ತರಲು ಗುತ್ತಿಗೆದಾರರ ಸಂಘ ಮುಂದಾಗಿದೆ.

ಕೆಂಪಣ್ಣಗೆ ಪಿಎಂ ಕಾರ್ಯಾಲಯದಿಂದ ಕರೆ

ರಾಜ್ಯದಲ್ಲಿ 40 ಪಸೆಂಟ್ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯದ ಅಧಿಕಾರಿಗಳು ಕರೆ ಮಾಡಿ ಮಾತನಾಡಿದ್ದರು. ಆರೋಪದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಪಿಎಂ ಕಾರ್ಯಾಲಯವು ಕೆಂಪಣ್ಣ ಅವರಿಗೆ ಸೂಚನೆ ನೀಡಿತ್ತು. ಅದರಂತೆ ರಾಜ್ಯ ಗುತ್ತಿಗೆದಾರರ ಸಂಘದಿಂದ ಬೆಂಗಳೂರಿನಲ್ಲಿರುವ ಕೇಂದ್ರ ಗೃಹ ಇಲಾಖೆಯ ಅಧಿಕಾರಿಗೆ ದಾಖಲಾತಿ ಸಲ್ಲಿಕೆ ಮಾಡಲು ಗುತ್ತಿಗೆದಾರರ ಸಂಘ ಮುಂದಾಗಿತ್ತು.

ಕೆಂಪಣ್ಣ ಭ್ರಷ್ಟಾಚಾರದ ಆರೋಪಕ್ಕೆ ಮುನಿರತ್ನ ಸೆಡ್ಡು, ರಾಜಕೀಯ ಪ್ರೇರಿತ ಎಂದ ಸಿಎಂ ಬೊಮ್ಮಾಯಿ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಚಿವ ವಿ.ಮುನಿರತ್ನ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಮುನಿರತ್ನ ಏನೇ ಆರೋಪ ಮಾಡಿರಬಹುದು, ಆದರೆ ಸಾಕ್ಷಿ ಇದೆಯಾ? ಅವರು ದಾಖಲೆ ಕೊಡಬೇಕು, ಇಲ್ಲದಿದ್ರೆ ನಾನು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇನೆ ಎಂದು ಟಿವಿ9ಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದರು.

ಆರೋಪಕ್ಕೆ ಸಂಬಂಧಿಸಿದಂತೆ ಒಂದು ಸಣ್ಣ ಸಾಕ್ಷಿ ಕೊಡಲಿ. ನನ್ನ ಬಳಿ ಯಾರು ಬಂದಿದ್ದಾರೆ, ನಾನು ಏನು ಹೇಳಿದ್ದೇನೆ. ಎಲ್ಲವನ್ನೂ ನಾನೇ ತನಿಖೆ ಮಾಡಿಸುತ್ತೇನೆ, ಇದನ್ನ ಬಿಡಲ್ಲ. ಸರ್ಕಾರ, ಸಚಿವರ ಬಗ್ಗೆ ಆರೋಪ ಮಾಡಿದ್ರೆ ಸುಮ್ಮನಿರಲ್ಲ. ಇದನ್ನ ಇಲ್ಲಿಗೆ ಬಿಡಲ್ಲ, ಕಾನೂನು ಹೋರಾಟ ಮಾಡ್ತೇನೆ. ನನ್ನ ತಪ್ಪಿದ್ದರೆ ಏನು ಶಿಕ್ಷೆ ಕೊಟ್ಟರೂ ನಾನು ಅನುಭವಿಸ್ತೇನೆ ಎಂದು ಹೇಳಿದ್ದಾರೆ.

ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರ ಆರೋಪದಲ್ಲಿ ಹುರುಳಿಲ್ಲ: ಸಿಎಂ ಬೊಮ್ಮಾಯಿ

ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರ ಆರೋಪದಲ್ಲಿ ಹುರುಳಿಲ್ಲ. ಕಾಂಗ್ರೆಸ್ ನಾಯಕರ ಮನೆಯಿಂದ ಹೊರಗೆ ಬಂದು ಆರೋಪ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಇವರ ಬಳಿ ದಾಖಲೆಗಳಿದ್ದರೆ ಯಾವುದೇ ಶಾಸಕ, ಸಚಿವ, ಅಧಿಕಾರಿ ವಿರುದ್ಧ ಲೋಕಾಯುಕ್ತರಿಗೆ ದೂರು ಕೊಡಲಿ. ಲೋಕಾಯುಕ್ತರು ತನಿಖೆ ಮಾಡಿ ಕ್ರಮ ತಗೊಳ್ತಾರೆ. ಆಧಾರ ರಹಿತ ಹೇಳಿಕೆಗಳು ನಿರ್ದಿಷ್ಟ ಉದ್ದೇಶದಿಂದ ಹೊರಗೆ ಬರುತ್ತವೆ. ಇವಕ್ಕೆ ನಾನು ಪ್ರತಿಕ್ರಿಯಿಸಬೇಕಿಲ್ಲ ಎಂದರು.