ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ, ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಿಗಲಿ -ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹಾಗೂ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಸಿಗುವ ಭರವಸೆ ಹೊರ ಹಾಕಿದ್ದಾರೆ. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.
ಬೆಂಗಳೂರು, ಜ.04: ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ನೋಡೋಣ ಎಂದು ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹಾಗೂ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಸಿಗುವ ಭರವಸೆ ಹೊರ ಹಾಕಿದ್ದಾರೆ. ಇನ್ನು ಇದೇ ವೇಳೆ ರಾಮಮಂದಿರ ಉದ್ಘಾಟನೆ ಆಮಂತ್ರಣದ ಬಗ್ಗೆ ಮಾತನಾಡಿದ್ದಾರೆ. ರಾಮಮಂದಿರ ಉದ್ಘಾಟನೆ ಒನ್ ಮ್ಯಾನ್ ಶೋ ಆಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಲೋಕಸಭಾ ಚುನಾವಣೆ ಬೇರೆ ಬರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಇನ್ನೂ ಸಮಯ ಇದೆ ಆಹ್ವಾನ ಕೊಡಲಿ. ಯಾವ ಸಿಎಂಗೂ ಆಹ್ವಾನ ಕೊಟ್ಟಿಲ್ಲ. ಉತ್ತರ ಪ್ರದೇಶ ಸಿಎಂಗೆ ಮಾತ್ರ ಆಹ್ವಾನ ಇದೆ. ನನಗೆ ಆಹ್ವಾನ ಬಂದ್ರೆ ಹೋಗಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯ ರಶ್ ಇರುತ್ತೆ, ಮುಂದೆ ಯಾವಾಗಾದರೂ ಹೋಗುತ್ತೇನೆ ಎಂದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್
ಬೆಳಕು ಚೆಲ್ಲಲು ಕರ್ನಾಟಕದಲ್ಲಿ ಸಾಕಷ್ಟು ವಿಷಯಗಳಿವೆ
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಹಳೇ ಕೇಸ್ ಗಳಿವೆ ಎಂದು ಪೋಲಿಸರು ಬಂಧಿಸಿದ್ದಾರೆ. ಇದರಲ್ಲಿ ಗೊಂದಲ ಮಾಡುವ ಅವಶ್ಯಕತೆ ಇಲ್ಲ. ಸರಿಯಾದ ರೀತಿಯಲ್ಲಿ ಇದ್ದರೆ ಪ್ರತಿಭಟನೆ ನಡೆಸಲಿ. ಜನರ ಸಮಸ್ಯೆಗಳ ಸಂಬಂಧ ಪ್ರತಿಭಟನೆ ನಡೆಸಲಿ. ಅದು ಬಿಟ್ಟು ಪ್ರಕರಣಗಳಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ಮಾಡ್ತಿದಾರೆ. ಬೆಳಕು ಚೆಲ್ಲಲು ಕರ್ನಾಟಕದಲ್ಲಿ ಸಾಕಷ್ಟು ವಿಷಯಗಳಿವೆ. ನ್ಯಾಯಾಲಯದಲ್ಲಿ ಅದನ್ನ ಸಾಬೀತುಪಡಿಸಿಕೊಳ್ಳಬೇಕು ಅಲ್ಲವಾ ? ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ