ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ

Munish Moudgil: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 11, 2023 | 6:34 PM

ಬೆಂಗಳೂರು, ಅಕ್ಟೋಬರ್​​​ 11: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil)​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಮುನೀಶ್ ಮೌದ್ಗಿಲ್​ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರು. ಮುನೀಶ್​ ಮೌದ್ಗಿಲ್ ಅವರು ಈ ಹಿಂದೆ ಸರ್ವೆ, ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವನ್ನು ಹೊಂದಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹುದ್ದೆ ಹೊಂದಿದ್ದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ಮುನೀಶ್ ಮೌದ್ಗಿಲ್​ ಅವರ ಕಾರ್ಯ ಮತ್ತು ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇ-ಆಡಳಿತಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್‌ನಲ್ಲಿ ಮುನೀಶ್ ಮೌದ್ಗಿಲ್ ಅವರು ಯುಪಿಒಆರ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದರು.

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ

  • ಮುನೀಶ್ ಮೌದ್ಗಿಲ್-ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)
  • ವಿನೋತ್ ಪ್ರಿಯಾ-ಬಿಬಿಎಂಪಿ ದಕ್ಷಿಣ ವಲಯ ಆಯುಕ್ತೆ
  • ಕರೀಗೌಡ-ಬಿಬಿಎಂಪಿ ಯಲಹಂಕ ವಲಯ ಆಯುಕ್ತ
  • ಆರ್​.ಸ್ನೇಹಲ್-ಬಿಬಿಎಂಪಿ ಪೂರ್ವ ವಲಯ ಆಯುಕ್ತೆ
  • ಪ್ರೀತಿ ಗೆಹ್ಲೋಟ್-ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತೆ
  • ಇಬ್ರಾಹಿಂ ಮೈಗೂರ್-ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Wed, 11 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್