ಬೆಂಗಳೂರು, ಅಕ್ಟೋಬರ್ 11: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil) ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.
ಮುನೀಶ್ ಮೌದ್ಗಿಲ್ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರು. ಮುನೀಶ್ ಮೌದ್ಗಿಲ್ ಅವರು ಈ ಹಿಂದೆ ಸರ್ವೆ, ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವನ್ನು ಹೊಂದಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹುದ್ದೆ ಹೊಂದಿದ್ದರು.
ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್ಡಿ ಕುಮಾರಸ್ವಾಮಿ
ಮುನೀಶ್ ಮೌದ್ಗಿಲ್ ಅವರ ಕಾರ್ಯ ಮತ್ತು ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇ-ಆಡಳಿತಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಿಷ್ಟು
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್‌ನಲ್ಲಿ ಮುನೀಶ್ ಮೌದ್ಗಿಲ್ ಅವರು ಯುಪಿಒಆರ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:27 pm, Wed, 11 October 23