Vinoth Priya R: ವಾರ್ತಾ ಇಲಾಖೆ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ನೇಮಕ
ವಾರ್ತಾ ಇಲಾಖೆ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (Information Commissioner) ಆಯುಕ್ತರಾಗಿ 2010ರ ಬ್ಯಾಚ್ನ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಆರ್ (Vinoth Priya R) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಿಯಾ ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಆಯುಕ್ತರಾಗಿ ನೇಮಕಗೊಂಡಿದ್ದ ಐಪಿಎಸ್ ಡಾ. ಪಿಎಸ್ ಹರ್ಷ ಅವರು ವ್ಯಾಸಂಗ ರಜೆಯಲ್ಲಿದ್ದು, ಹುದ್ದೆ ಖಾಲಿ ಇತ್ತು. ಈಗ ಐಎಎಸ್ ಪ್ರಿಯಾ ಅವರು ಡಿಐಪಿಆರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಕೂಡ ಏಪ್ರಿಲ್ 29 ರಂದು ನಿವೃತ್ತರಾದರು.
Published On - 10:10 pm, Sat, 29 April 23




