Vinoth Priya R: ವಾರ್ತಾ ಇಲಾಖೆ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ನೇಮಕ

|

Updated on: Apr 29, 2023 | 10:11 PM

ವಾರ್ತಾ ಇಲಾಖೆ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

Vinoth Priya R: ವಾರ್ತಾ ಇಲಾಖೆ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ನೇಮಕ
ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ
Follow us on

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (Information Commissioner) ಆಯುಕ್ತರಾಗಿ 2010ರ ಬ್ಯಾಚ್​ನ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಆರ್ (Vinoth Priya R) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಿಯಾ ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಆಯುಕ್ತರಾಗಿ ನೇಮಕಗೊಂಡಿದ್ದ ಐಪಿಎಸ್​ ಡಾ. ಪಿಎಸ್​ ಹರ್ಷ ಅವರು ವ್ಯಾಸಂಗ ರಜೆಯಲ್ಲಿದ್ದು, ಹುದ್ದೆ ಖಾಲಿ ಇತ್ತು. ಈಗ ಐಎಎಸ್ ಪ್ರಿಯಾ ಅವರು ಡಿಐಪಿಆರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಕೂಡ ಏಪ್ರಿಲ್ 29 ರಂದು ನಿವೃತ್ತರಾದರು.

 

Published On - 10:10 pm, Sat, 29 April 23