ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ವಿರುದ್ಧ ಭುಗಿಲೆದ್ದ ಆಕ್ರೋಶ, ಬಂದ್​ಗೆ ಬೆಂಬಲ ನಿರಾಕರಿಸಿದ ಮುಸ್ಲಿಂ ವ್ಯಾಪಾರಿಗಳು

ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಸಂಬಂಧ ಕರೆ ನೀಡಲಾಗಿದ್ದ ಜು.12ರ ಬಂದ್​ಗೆ ಈಗಾಗಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ನೀಡಿದ ಬಂದ್​ ಕರೆಗೆ ಮುಸ್ಲಿಂ ವ್ಯಾಪಾರಸ್ಥರು ಆಕ್ರೋಶ ವ್ಯಕ್ತವಾಗಿದ್ದು, ಬಂದ್​ಗೆ ಬೆಂಬಲ ಇಲ್ಲ ಎಂದಿದ್ದಾರೆ.

ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ವಿರುದ್ಧ ಭುಗಿಲೆದ್ದ ಆಕ್ರೋಶ, ಬಂದ್​ಗೆ ಬೆಂಬಲ ನಿರಾಕರಿಸಿದ ಮುಸ್ಲಿಂ ವ್ಯಾಪಾರಿಗಳು
ಚಾಮರಾಜಪೇಟೆ ಈದ್ಗಾ ಮೈದಾನ
Follow us
TV9 Web
| Updated By: Rakesh Nayak Manchi

Updated on: Jul 04, 2022 | 9:44 AM

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದ (Chamrajpet Idgah Maidan) ಮಾಲೀಕತ್ವ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ, ಒಂದಲ್ಲಾ ಒಂದು ರೀತಿಯಲ್ಲಿ ವಿವಾದ ಜೋರಾಗುತ್ತಿದ್ದು, ಇದೀಗ ಜುಲೈ 12ರಂದು ಸಂಜೆ 6ರವರೆಗೆ ಚಾಮರಾಜಪೇಟೆ ಬಂದ್​(Chamarajpet Bandh)ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್​ಗೆ ಮುಸ್ಲಿಂ ವ್ಯಾಪಾರಿಗಳು ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ. ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಸಂಘಟನೆಗಳು ಶಾಂತಿಯುತ ಬಂದ್​ಗೆ ಕರೆ ನೀಡಿವೆ. ಅಂದು ಬೃಹತ್ ಪ್ರತಿಭಟನೆ, ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಆದರೆ ಈ ಬಂದ್​ಗೆ ಮುಸ್ಲಿಂ ವ್ಯಾಪಾರಿಗಳು ಖಂಡನೆ ವ್ಯಕ್ತಪಡಿಸಿ ಬಂದ್​ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬಕ್ರೀದ್ ನಂತರ ನಡೆಯುವ ಈ ಬಂದ್​ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುವ ಲಕ್ಷಣಗಳು ಎದ್ದುಕಾಣುತ್ತಿದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ

ಚಾಮರಾಜಪೇಟೆ ಬಂದ್​ಗೆ ಕರೆ ನೀಡಿರುವ ವಿಚಾರದಲ್ಲಿ ಆಕ್ರೋಶಕ್ಕೆ ಭುಗಿಲೆದ್ದಿದ್ದು, ಮುಸ್ಲಿಂ ವ್ಯಾಪಾರಿಗಳಿಂದ ಬಂದ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಂದ್ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸುತ್ತಿರುವ ಮುಸ್ಲಿಂ ವ್ಯಾಪಾರಿಗಳು, ಬಂದ್​ನಿಂದ ಸರ್ಕಾರಕ್ಕೂ ಲಾಸ್ ಹಾಗೂ ವ್ಯಾಪಾರಿಗಳಿಗೂ ಹೊಡೆತ ಬೀಳುತ್ತದೆ ಎಂದು ಮುಸ್ಲಿಂ ವ್ಯಾಪಾರಿಗಳು ಹೇಳುತ್ತಾರೆ. ಬಂದ್​ನಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ, ಸರ್ಕಾರ ಏನು ಹೇಳುತ್ತದೆಯೋ ಅದನ್ನು ಮಾಡಬೇಕು. ಅದಾಗ್ಯೂ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳುತ್ತಿರುವ ಮುಸ್ಲಿಂ ವರ್ತಕರು, ಮೈದಾನ ವಕ್ಫ್​ ಬೋರ್ಡ್ ಪ್ರಾಪರ್ಟಿಯಾಗಿದೆ ಎಂದು ಹೇಳಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ, ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದೆ.

ಇದನ್ನೂ ಓದಿ: ಎಚ್ಚರ ಪೋಷಕರೇ ಎಚ್ಚರ… ಹೇಳಿಕೊಳ್ಳಲು ಇದೊಂದು ಬುಕ್​ಸ್ಟಾಲ್, ಒಳಗಡೆ ನಡೆಯುತ್ತಿತ್ತು ಸೆಲ್ಯೂಷನ್ ದಂಧೆ!

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ