AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Idgah Maidan: 75 ವರ್ಷದ ಬಳಿಕ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಇಂದು ಮೊದಲ ಬಾರಿಗೆ ಹಾರಿತು ರಾಷ್ಟ್ರ ಧ್ವಜ; ಏನಿದು ವಿವಾದ?

1947ರಿಂದ ಇದುವರೆಗೂ ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್​ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.

Idgah Maidan: 75 ವರ್ಷದ ಬಳಿಕ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಇಂದು ಮೊದಲ ಬಾರಿಗೆ ಹಾರಿತು ರಾಷ್ಟ್ರ ಧ್ವಜ; ಏನಿದು ವಿವಾದ?
ತ್ರಿವರ್ಣ ಧ್ವಜ
TV9 Web
| Edited By: |

Updated on:Aug 15, 2022 | 2:04 PM

Share

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ (Independence) ಸಿಕ್ಕಿ 75 ವರ್ಷಗಳು ಕಳೆದಿವೆ. ಆದರೆ, 1947ರಿಂದ ಇದುವರೆಗೂ ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ (Idgah Maidan) ಒಮ್ಮೆಯೂ ಆಗಸ್ಟ್​ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ಈ ಹಿನ್ನೆಲೆಯಲ್ಲಿ ಗಲಾಟೆ ಉಂಟಾಗಬಹುದು ಎಂಬ ಕಾರಣದಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇಡೀ ಈದ್ಗಾ ಮೈದಾನವನ್ನು ಪೊಲೀಸ್ ಕೋಟೆಯಾಗಿ ಪರಿವರ್ತಿಸಲಾಗಿತ್ತು.

ಕಂದಾಯ ಇಲಾಖೆಯ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಶಿವಣ್ಣ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈದ್ಗಾ ಮೈದಾನದಲ್ಲಿ ಸಾರ್ವಜನಿಕರಿಗಾಗಿ 300 ಕುರ್ಚಿಗಳ ವ್ಯವಸ್ಥೆ ಮಾಡಲಾಗಿತ್ತು. ಧ್ವಜಾರೋಹಣದ ನಂತರ ಬಿಬಿಎಂಪಿ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಂದಾಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸಾರ್ವಜನಿಕರಿಗೆ ಸಿಹಿ ಹಂಚಿದರು.

ಇದನ್ನೂ ಓದಿ: Dakshina Kannada News: ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದರೂ ಅನುಮತಿ ನಿರಾಕರಿಸಿದ್ದಕ್ಕೆ ಚಾಮರಾಜಪೇಟೆ ನಾಗರಿಕ ವೇದಿಕೆಯ ಸದಸ್ಯರು ಅಧಿಕಾರಿಗಳನ್ನು ಪ್ರಶ್ನಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಚಾಮರಾಜಪೇಟೆ ನಾಗರಿಕ ವೇದಿಕೆಯ ಹೋರಾಟಕ್ಕೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಮತ್ತು ಫ್ಲೆಕ್ಸ್‌ಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಹೆಚ್ಚುವರಿ ಕಮಿಷನರ್ ಪಶ್ಚಿಮ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ 3 ಡಿಸಿಪಿಗಳು, 6 ಎಸಿಪಿಗಳು, 15 ಇನ್ಸ್‌ಪೆಕ್ಟರ್‌ಗಳು, 50 ಪಿಎಸ್‌ಐ, 30 ಎಎಸ್‌ಐ ಮತ್ತು 300 ಪೊಲೀಸ್ ಪೇದೆಗಳು, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ), 2 ನಗರ ಸಶಸ್ತ್ರ ಪೊಲೀಸ್ (ಸಿಎಆರ್) 5 ತುಕಡಿಗಳನ್ನು ಒಳಗೊಂಡ ತಂಡ. ರಾಪಿಡ್ ಆಕ್ಷನ್ ಫೋರ್ಸ್ (RPF)ನ 1 ತುಕಡಿಯನ್ನು ನಿಯೋಜಿಸಲಾಗಿತ್ತು.

ಇನ್ನು, ಆಸ್ತಿ ಮಾಲೀಕತ್ವದ ಗೊಂದಲಕ್ಕೆ ತೆರೆ ಎಳೆದಿರುವ ಬಿಬಿಎಂಪಿ ವಿವಾದಿತ ನಿವೇಶನದ ಜಮೀನು ಕಂದಾಯ ಇಲಾಖೆಗೆ ಸೇರಿದ್ದು ಎಂದು ಘೋಷಿಸಿದೆ. ವಕ್ಫ್ ಮಂಡಳಿಯು ನಿವೇಶನದ ಮಾಲೀಕತ್ವವನ್ನು ಹೊಂದಿತ್ತು ಮತ್ತು ಹಿಂದೂ ಹಬ್ಬಗಳನ್ನು ಆಚರಿಸಲು ಆಕ್ಷೇಪಿಸಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ: ಈದ್ಗಾ ಮೈದಾನದಲ್ಲಿ ನಡೀತು ಹೈಡ್ರಾಮಾ!

ಚಾಮರಾಜಪೇಟೆ ನಾಗರೀಕ ವೇದಿಕೆ ಹಾಗೂ ಹಿಂದೂ ಕಾರ್ಯಕರ್ತರು ಈ ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ರಾಷ್ಟ್ರೀಯ ಕಾರ್ಯಕ್ರಮಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಹಿಂದೂ ಹಬ್ಬಗಳನ್ನು ಆಚರಿಸಲು ಅವಕಾಶ ನೀಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದರು. ಇದೀಗ ವಿವಾದಿತ ಸ್ಥಳದಲ್ಲಿರುವ ಈದ್ಗಾ ಗೋಪುರವನ್ನು ಕೆಡವುವಂತೆ ಒತ್ತಾಯಿಸುತ್ತಿದ್ದಾರೆ.

ಕಂದಾಯ ಇಲಾಖೆಯು ನಿವೇಶನದ ಮಾಲೀಕತ್ವ ಪಡೆದ ನಂತರ ಈದ್ಗಾ ಟವರ್ ಸೇರಿದಂತೆ ಆವರಣದಲ್ಲಿರುವ ಎಲ್ಲವೂ ಹಾಗೆಯೇ ಉಳಿದು ಆಟದ ಮೈದಾನವಾಗಲಿದೆ ಎಂದು ಹೇಳಿಕೆ ನೀಡಿತ್ತು. ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಭೂಮಿ ಹಸ್ತಾಂತರಿಸುವಂತೆ ಬಿಬಿಎಂಪಿಯ ಆದೇಶವಿದೆ ಎಂದು ವಕ್ಫ್ ಬೋರ್ಡ್ ಪ್ರತಿಪಾದಿಸಿತ್ತು.

ಆದರೂ, ಮಾಲೀಕತ್ವವನ್ನು ಪಡೆಯಲು ದಾಖಲೆಗಳನ್ನು ಸಲ್ಲಿಸಲು ವಕ್ಫ್ ಮಂಡಳಿಗೆ ಸಾಕಷ್ಟು ಸಮಯ ನೀಡಲಾಗಿದೆ ಎಂದು ಬಿಬಿಎಂಪಿ ಸಮರ್ಥಿಸಿಕೊಂಡಿತ್ತು. ಯಾವುದೇ ದಾಖಲೆ ನೀಡದ ಕಾರಣ ಮಾಲೀಕತ್ವವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಈ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ವಕ್ಫ್ ಮಂಡಳಿ ತಿಳಿಸಿದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Mon, 15 August 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ