ಯಾರಾದ್ರೂ ನನ್ನ ಪರ ಮಾತಾಡಿದ್ರೆ ನೋಟಿಸ್ ಕೊಡ್ತೀನಿ, ನನಗೆ ಯಾರ ಬೆಂಬಲವೂ ಬೇಡ -ಇಕ್ಬಾಲ್ ಹುಸೇನ್ ವಿರುದ್ಧ ಡಿಕೆ ಶಿವಕುಮಾರ್ ಗರಂ

ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದರು. ಈ ಸಂಬಂಧ ಈಗ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ಎಂದು ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಯಾರಾದ್ರೂ ನನ್ನ ಪರ ಮಾತಾಡಿದ್ರೆ ನೋಟಿಸ್ ಕೊಡ್ತೀನಿ, ನನಗೆ ಯಾರ ಬೆಂಬಲವೂ ಬೇಡ -ಇಕ್ಬಾಲ್ ಹುಸೇನ್ ವಿರುದ್ಧ ಡಿಕೆ ಶಿವಕುಮಾರ್ ಗರಂ
ಡಿಕೆ ಶಿವಕುಮಾರ್
Follow us
Anil Kalkere
| Updated By: ಆಯೇಷಾ ಬಾನು

Updated on: Nov 05, 2023 | 9:18 AM

ಬೆಂಗಳೂರು, ನ.05: ನಾನೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಪರ ಬ್ಯಾಟ್ ಬೀಸಿದ್ದರು. ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಈಗ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ಎಂದು ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಕೆಶಿ

ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ. ಪಕ್ಷದಲ್ಲಿ ಒಂದು ಶಿಸ್ತು ಇರಬೇಕು. ನನಗೆ ಯಾವ ಶಾಸಕರ ಬೆಂಬಲನೂ ಬೇಡ, ಯಾವ ಶಾಸಕರೂ ಬೇಡ. ರಾಮನಗರ MLA ಇಕ್ಬಾಲ್ ಹುಸೇನ್​ಗೆ ನೋಟಿಸ್ ಕೊಡಬೇಕು ಎಂದು ಕೊಂಡಿದ್ದೀನಿ. ನನಗೆ ಯಾರ ರೆಕಮೆಂಡೇಶನ್ ಕೂಡ ಬೇಡ. ಐ ಡೋಂಟ್ ವಾಂಟ್ ಏನೀ ರೆಕಮೆಂಡೇಶನ್ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ.

ಇದನ್ನೂ ಓದಿ: ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್

ಆಪರೇಷನ್ ಹಸ್ತಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಡಿ.ಕೆ. ಶಿವಕುಮಾರ್‌‌‌ ನಾಳೆ ಬೆಳಗ್ಗೆಯೇ ಮುಖ್ಯಮಂತ್ರಿಯಾದರೆ ನಮ್ಮ 19 ಶಾಸಕರ ಬೆಂಬಲ ನೀಡುತ್ತೇನೆಂದು ಹೆಚ್​ಡಿ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದರು. ಸದ್ಯ ಡಿಕೆ ಶಿವಕುಮಾರ್​ಗೆ ಸಿಎಂ ಆಗಲು ಬೆಂಬಲ ಕೊಡುವ ಮೂಲಕ ಒಕ್ಕಲಿಗ ಅಸ್ತ್ರ ಪ್ರಯೋಗ ಮಾಡಲು ಹೆಚ್​ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಒಕ್ಕಲಿಗ ಅಸ್ತ್ರ ಪ್ರಯೋಗದ ಮೂಲಕ ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡಲಿದ್ದಾರೆ. ಡಿಕೆ ಶಿವಕುಮಾರ್ ಜೆಡಿಎಸ್ ಶಾಸಕರನ್ನ ಸೆಳೆಯಲು ಮುಂದಾಗಿದ್ದರು. ಹೀಗಾಗಿ ಡಿಕೆ ಬ್ರದರ್ಸ್ ಓಟಕ್ಕೆ ಬ್ರೇಕ್ ಹಾಕಲು ಹೆಚ್​ಡಿ ಕುಮಾರಸ್ವಾಮಿ ಒಕ್ಕಲಿಗಸ್ತ್ರ ಪ್ರಯೋಗ ಮಾಡಿದ್ದಾರೆ.

ಡಿಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ 19 ಜನ ಶಾಸಕರ ಬೆಂಬಲ ಘೋಷಣೆ ಮೂಲಕ ನಾನು ಸಮುದಾಯದ ನಾಯಕನ ಪರ ಅನ್ನೋ ಸಂದೇಶವನ್ನು ಹೆಚ್​ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಮತ್ತೊಂದೆಡೆ ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ್ರಾ ಎಂಬ ಅಂಶ ವ್ಯಕ್ತವಾಗುತ್ತಿದೆ. ಒಂದು ಕಡೆ ಡಿಕೆ ಬ್ರದರ್ಸ್ ಆಪರೇಷನ್ ಹಸ್ತಕ್ಕೆ ಕೌಂಟರ್ ಕೊಟ್ಟರೆ ಮತ್ತೊಂದೆಡೆ ತಾಖತ್ ಇದ್ರೆ ಡಿಕೆಶಿ ಸಿಎಂ ಮಾಡಿ ಎಂದು ಕಾಂಗ್ರೆಸ್ ಗೆ ಒತ್ತಡ ಹಾಕೋ ಪ್ಲಾನ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್