Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ; ವಿಧಾನಸಭೆಯಲ್ಲಿ ಕಾಂಗ್ರೆಸ್​ಗೆ ಹೆಚ್​ಡಿ ಕುಮಾರಸ್ವಾಮಿ ಸಲಹೆ

ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ‌ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ ಬೇಳೆ, ಎಣ್ಣೆ, ಬೆಲ್ಲ, ಮುಂತಾದ ಪದಾರ್ಥ ಕೊಡಬಹುದು ಎಂದು ಹೆಚ್​ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ; ವಿಧಾನಸಭೆಯಲ್ಲಿ ಕಾಂಗ್ರೆಸ್​ಗೆ ಹೆಚ್​ಡಿ ಕುಮಾರಸ್ವಾಮಿ ಸಲಹೆ
ಹೆಚ್​ಡಿ ಕುಮಾರಸ್ವಾಮಿ
Follow us
ಕಿರಣ್​ ಹನಿಯಡ್ಕ
| Updated By: ಆಯೇಷಾ ಬಾನು

Updated on: Jul 12, 2023 | 3:16 PM

ಬೆಂಗಳೂರು: ಇಂದು (ಜು.12) ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ(HD Kumaraswamy) ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದು ಅನ್ನಭಾಗ್ಯ ಯೋಜನೆಯಡಿ(Anna Bhagya) ಹೆಚ್ಚುವರಿ 5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ‌ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ ಬೇಳೆ, ಎಣ್ಣೆ, ಬೆಲ್ಲ, ಮುಂತಾದ ಪದಾರ್ಥ ಕೊಡಬಹುದು. ಗೃಹಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಸಹಬಾಳ್ವೆ ಹಾಳಾಗದಂತೆ ಕ್ರಮ ವಹಿಸಿ. ಯುವಭತ್ಯೆ ಯೋಜನೆಯಡಿ ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ಮಾತ್ರ ಯಾಕೆ? ನಿರುದ್ಯೋಗಿ ಪದವೀಧರರಿಗೆ 3000 ಆದ್ರೆ ಡಿಪ್ಲೋಮಾದವರಿಗೆ 1.5 ಸಾವಿರ ಮಾತ್ರ ಯಾಕೆ? ಈ ವರ್ಷದ ನಿರುದ್ಯೋಗಿಗಳು ಮಾತ್ರ ನಿರುದ್ಯೋಗಿಗಳಾ? ಹಿಂದಿನ ವರ್ಷಗಳಲ್ಲಿರುವವರು ನಿರುದ್ಯೋಗಿಗಳಲ್ವಾ? ನೀವು ನುಡಿದಂತೆ ನಡೆದಿಲ್ಲ ಅಂತ ಹೇಳಲ್ಲ, ಆದ್ರೆ ನುಡಿದಂತೆ ಸಂಪೂರ್ಣ ನಡೆದಿಲ್ಲ. ಕೊಟ್ಟ ಮಾತು ಸಂಪೂರ್ಣವಾಗಿ ಉಳಿಸಿಕೊಳ್ಳುವತ್ತ ಗಮನ ಕೊಡಿ ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಸಲಹೆ ನೀಡಿದರು.

ಇನ್ನು ಗ್ಯಾರಂಟಿ ಕಾರ್ಡ್‌ಗಳಿಗೆ ಸಹಿ ಹಾಕಿ‌ ಕೊಟ್ಟಿದೀರಿ. ಎಲ್ಲರಿಗೂ ಖಚಿತ, ಉಚಿತ, ನಿಶ್ಚಿತ ಅಂದಿರಿ. ಆದ್ರೆ ಮಂತ್ರಿಯೊಬ್ಬರು ದಾರಿಯಲ್ಲಿ ಹೋಗೋರಿಗೆಲ್ಲಾಕೊಡಲು ಆಗುತ್ತಾ ಅಂದ್ರು. ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ ಅಂದಿದ್ದೀರಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

5 ಕೆಜಿ ಅಕ್ಕಿಯ ಬದಲಾಗಿ ಬ್ಯಾಂಕ್ ಖಾತೆಗಳಿಗೆ 170 ರೂ. ಹಣ ವರ್ಗಾವಣೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, 3ನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದ್ದಾರೆ.

ಪಡಿತರಚೀಟಿದಾರರ ಅಕೌಂಟ್ ಗೆ ತಲಾ ಒಬ್ಬರಿಗೆ ಪ್ರತಿ ಕೆಜಿಗೆ 34 ರೂ.ನಂತೆ 170 ವರ್ಗಾವಣೆ ಮಾಡಲಾಯಿತು. ಕರ್ನಾಟಕ ರಾಜ್ಯದಲ್ಲಿ 1.28 ಕೋಟಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರು ಇದ್ದಾರೆ. ಇದರಲ್ಲಿ ಶೇ. 99 ರಷ್ಟು ಕಾರ್ಡುಗಳು ಆಧಾರ್ ಜೋಡಣೆ ಹೊಂದಿವೆ. ಶೇ. 82 ರಷ್ಟು ಪಡಿತರ ಚೀಟಿಗಳು ಅಂದರೆ 1.06 ಪಡಿತರ ಚೀಟಿಗಳು. ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಜೋಡಣೆಯಾಗಿವೆ. ಈ ಖಾತೆಗಳಿಗೆ ನಗದು ವರ್ಗಾವಣೆ ಮಾಡಲಾಗುವುದು. ಉಳಿದ ಕಾರ್ಡುದಾರರಿಗೆ ಖಾತೆ ತೆರೆಯಲು ಮಾಹಿತಿ ನೀಡಲಾಗುವುದು. 1.27 ಕೋಟಿ ಕಾರ್ಡುಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲಾಗಿದ್ದು ಅವರ ಖಾತೆಗೆ ನಗದು ವರ್ಗಾಯಿಸಲಾಗುವುದು. ಶೇ. 94 ರಷ್ಟು ಕುಟುಂಬಗಳ ಮುಖ್ಯಸ್ಥರು ಮಹಿಳೆಯರು ಹಾಗೂ ಶೇ. 5 ರಷ್ಟು ಪುರುಷರಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ. ಈ ಯೋಜನೆಗೆ ಅಂದಾಜು 800 ಕೋಟಿ ರೂ. ವೆಚ್ಚ ತಗುಲಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ