IIM Bengaluru: ಐಐಎಂನ 27 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಹಳೆ ವಿದ್ಯಾರ್ಥಿಗಳ ಸಮಿತಿಯ ಹಿರಿಯ ಸಂಯೋಜಕರೂ ಆಗಿದ್ದರು ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ತಿಳಿಸಿದೆ.

IIM Bengaluru: ಐಐಎಂನ 27 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಆಯುಷ್ ಗುಪ್ತಾ (IIM Twitter Image)Image Credit source: Twitter
Follow us
Ganapathi Sharma
|

Updated on: Jul 26, 2023 | 4:31 PM

ಬೆಂಗಳೂರು: ಬೆಂಗಳೂರು ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ವಿದ್ಯಾರ್ಥಿ, 27 ವರ್ಷ ವಯಸ್ಸಿನ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ಐಐಎಂ ಅಧಿಕೃತ ಟ್ವಿಟರ್​ ಹ್ಯಾಂಡಲ್​​ನಲ್ಲಿ ಮಾಹಿತಿ ನೀಡಿದೆ. ಮೃತ ವಿದ್ಯಾರ್ಥಿಯು ಮ್ಯಾನೇಜ್​ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ಎರಡನೇ ವರ್ಷದ ಅಧ್ಯಯನ ಮಾಡುತ್ತಿದ್ದರು. ಆಯುಷ್ ಗುಪ್ತಾ ಸಾವಿನಿಂದ ಬಹಳ ಬೇಸರವಾಗಿದೆ ಎಂದು ಐಐಎಂ ಭಾನುವಾರ ಟ್ವೀಟ್ ಮಾಡಿತ್ತು.

ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಹಳೆ ವಿದ್ಯಾರ್ಥಿಗಳ ಸಮಿತಿಯ ಹಿರಿಯ ಸಂಯೋಜಕರೂ ಆಗಿದ್ದರು ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಭಾನುವಾರ ಟ್ವೀಟ್ ಮಾಡಿತ್ತು. ಸೋಮವಾರದ ತರಗತಿಗಳನ್ನು ರದ್ದುಪಡಿಸಿದ್ದಲ್ಲದೆ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿತ್ತು.

ಫೇರಿಂಗ್ ಕ್ಯಾಪಿಟಲ್‌ನಲ್ಲಿ ಅವರ ಬೇಸಿಗೆಯ ಇಂಟರ್ನ್ ಆಗಿದ್ದ ಆಯುಷ್ ಗುಪ್ತಾ, ಇನ್‌ಸ್ಟಿಟ್ಯೂಟ್‌ನ ಹಳೆಯ ವಿದ್ಯಾರ್ಥಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಅವರು 2017 ರಲ್ಲಿ ಬಿಐಟಿಎಸ್ ಪಿಲಾನಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದರು ಎಂದು ಸಾಮಾಜಿಕ ಮಾಧ್ಯಮದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಉಲ್ಲೇಖಿಸಿದೆ.

ಇದನ್ನೂ ಓದಿ: Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ

ಆಯುಷ್ ಗುಪ್ತಾ ನಿಧನದ ಬಗ್ಗೆ ಲಿಂಕ್ಡ್​ಇನ್​​ನಲ್ಲಿಯೂ ಐಐಎಂ ಸಂದೇಶ ಪ್ರಕಟಿಸಿದ್ದು, ಅನೇಕ ಮಂದಿ ಅವರ ಜತೆಗಿನ ಒಡನಾಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ