ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಅಕ್ರಮ (Illegal) ಆಸ್ತಿ ಹೊಂದಿರುವುದು ಪತ್ತೆಯಾಗಿದೆ. ಜುಲೈ 5ರಂದು ಜಮೀರ್ ಮನೆ, ಕಚೇರಿ ಸೇರಿ ಒಟ್ಟು ಐದು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಅಗತ್ಯ ದಾಖಲೆಗಳನ್ನ ಕೊಂಡೊಯ್ದಿದ್ದರು. ತನಿಖೆ ವೇಳೆ ಶಾಸಕ ಕೋಟಿ ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದು ಪತ್ತೆಯಾಗಿದೆ. ಈ ಹಿಂದೆ ದಾಳಿ ನಡೆಸಿದ್ದ ಇಡಿ ಆಸ್ತಿ ಕುರಿತು ವರದಿ ನೀಡಿತ್ತು. ಇಡಿ ಶಿಫಾರಸಿನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬರೋಬ್ಬರಿ 87,44,05,057 ರೂಪಾಯಿ (87 ಕೋಟಿ) ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಈಗಾಗಲೇ ಎಸಿಬಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿಕೊಂಡಿದೆ. ಜೊತೆಗೆ ಅಧಿಕಾರಿಗಳು ಕೆಲ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ.
ಅಸಮತೋಲನ ಆಸ್ತಿ ಗಳಿಕೆ ಆರೋಪದಡಿ 85 ಎಸಿಬಿ ಅಧಿಕಾರಿಗಳು 5 ತಂಡಗಳಿಂದ ದಾಳಿ ನಡೆಸಿದ್ದರು. 8 ಗಂಟೆ ಕಾಲ ಸುದೀರ್ಘ ಶೋಧಕಾರ್ಯ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ತಂದೆ ‘ಟೈಗರ್’ ಪ್ರಭಾಕರ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್ ಪ್ರಭಾಕರ್ಗೆ ರವಿಚಂದ್ರನ್ ವಿಶ್
ಎಲ್ಲೆಲ್ಲೆ ಎಸಿಬಿ ರೇಡ್: ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್ ಬಳಿಯ ನಿವಾಸ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್ ಫ್ಲ್ಯಾಟ್, ಸದಾಶಿವನಗರದ ಗೆಸ್ಟ್‌ಹೌಸ್, ಬನಶಂಕರಿಯ ಜಿ.ಕೆ.ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದ ಟ್ರಾವೆಲ್ಸ್ ಕಚೇರಿ ಸೇರಿ ಒಟ್ಟು 5 ಕಡೆ ಎಸಿಬಿ ದಾಳಿ ನಡೆದಿತ್ತು.
25 ಬುಲೆಟ್‌ಗಳು ಪತ್ತೆ: ಇನ್ನು ದಾಳಿ ವೇಳೆ ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿ 24 ಜೀವಂತ ಗುಂಡುಗಳು ಪತ್ತೆಯಾಗಿದ್ದವು. ಹಾಗೂ 1 ಖಾಲಿ ಬುಲೆಟ್ ಪತ್ತೆಯಾಗಿತ್ತು.
ಇದನ್ನೂ ಓದಿ: Rain Updates: ಭಾರೀ ಮಳೆಯಿಂದ ಮಹಾರಾಷ್ಟ್ರ, ಗೋವಾದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Published On - 8:52 am, Thu, 7 July 22