ಬೆಂಗಳೂರು: ಅಕ್ರಮ ಬ್ಯಾನರ್, ಹೋರ್ಡಿಂಗ್ಸ್, ಫ್ಲೆಕ್ಸ್ ಕಂಡರೆ ಬಿಬಿಎಂಪಿಯ ಈ ನಂಬರ್ಗೆ ವಾಟ್ಸಪ್ ಮಾಡಿ
ಬಿಬಿಎಂಪಿಯ ತೆರೆದ ಸ್ಥಳಗಳ ಕಾಯ್ದೆ ಸೆಕ್ಷನ್ 3ರ ಅಡಿಯಲ್ಲಿ ಬ್ಯಾನರ್ ಹಾಗೂ ಬಂಟಿಂಗ್ಸ್, ಫ್ಲೆಕ್ಸ್ ಮತ್ತು ಪೋಸ್ಟರ್ ಹಾಕುವುದನ್ನು ನಿಷೇಧ ಮಾಡಲಾಗಿದೆ. ಆದೇಶ ಉಲ್ಲಂಘಿಸುವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಬಿಬಿಎಂಪಿ ಅನೇಕ ಬಾರಿ ತಿಳಿಸಿತ್ತು. ಆದರೂ ಕೂಡ ನಗರದಲ್ಲಿ ಬ್ಯಾನರ್ ಹಾಕಲಾಗುತ್ತದೆ.
ಬೆಂಗಳೂರು, ಮೇ 10: ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ (Banner) ಹಾಕುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಷೇಧಿಸಿದೆ. ಆದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಹಾಕಿದರೇ, ಆ ಸ್ಥಳ ಮತ್ತು ಜಾಹಿರಾತು ಫೋಟೋ ತೆಗೆದು ನಮಗೆ ಕಳುಹಿಸಿ ಎಂದು ಬಿಬಿಎಂಪಿ 94806 85700 ವಾಟ್ಸಪ್ ಸಂಖ್ಯೆ ನೀಡಿದೆ.
ಅನಧಿಕೃತವಾಗಿ ಬ್ಯಾನರ್‌ಗಳನ್ನು ಹಾಕಿ ಸಾರ್ವಜನಿಕ ಸೌಂದರ್ಯಕ್ಕೆ ದಕ್ಕೆ ತರುವುದು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್ ದಾಖಲಿಸಲಾಗುತ್ತದೆ. ಅಕ್ರಮ ಬ್ಯಾನರ್ಗಳ ಬಗ್ಗೆ ದೂರುಗಳನ್ನು ನೀಡಲು ಬಿಬಿಎಂಪಿಯ 94806 85700 ಸಂಖ್ಯೆಗೆ ವಾಟ್ಸಾಪ್ ಮಾಡಬಹುದು ಎಂದಿದೆ.
ಕಾಂಗ್ರೆಸ್ ಮುಖಂಡನ ವಿರುದ್ಧ FIR
ನಿಷೇಧದ ನಡುವೆಯೂ ನಗರದ ಬನಶಂಕರಿ ಎರಡನೇ ಹಂತದಲ್ಲಿ ಅಕ್ರಮವಾಗಿ ಬ್ಯಾನರ್ ಹಾಕಿದ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. “ಯಾವುದೇ ಪ್ರಾಧಿಕಾರದ ಅನುಮತಿ ಪಡೆಯದೇ ಕಾಂಗ್ರೆಸ್ ಮುಖಂಡ ಕಾರ್ತಿಕ್ ವೆಂಕಟೇಶ ಮೂರ್ತಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿ ಬನಶಂಕರಿ ಎರಡನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂಕೆ ಪಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಕಾಶ್ ಗೌಡ, ಪ್ರಜ್ವಲ್ ವಿ, ಕಾರ್ತಿಕ್ ಎಂ, ಯುಗಂದರ್ ಮತ್ತಿತರರ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: ತೆರಿಗೆ ಬಾಕಿ: ಮಂತ್ರಿಮಾಲ್ಗೆ ಬಿಬಿಎಂಪಿ ಬೀಗ
ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಬಿಬಿಎಂಪಿಯ ತೆರೆದ ಸ್ಥಳಗಳ ಕಾಯ್ದೆ ಸೆಕ್ಷನ್ 3ರ ಅಡಿಯಲ್ಲಿ ಬ್ಯಾನರ್ ಹಾಗೂ ಬಂಟಿಂಗ್ಸ್, ಫ್ಲೆಕ್ಸ್ ಮತ್ತು ಪೋಸ್ಟರ್ ಹಾಕುವುದನ್ನು ನಿಷೇಧ ಮಾಡಲಾಗಿದೆ. ಆದೇಶ ಉಲ್ಲಂಘಿಸುವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಬಿಬಿಎಂಪಿ ಅನೇಕ ಬಾರಿ ತಿಳಿಸಿತ್ತು. ಆದ್ರೆ, ರಾಜಕಾರಣಿಗಳ ಬ್ಯಾನರ್ ಮತ್ತು ಫ್ಲೆಕ್ಸ್‌ಗಳು ವಿವಿಧೆಡೆ ರಾರಾಜಿಸುತ್ತಿದ್ದರೂ ಯಾವುದೇ ಕ್ರಮವಹಿಸಿರಲಿಲ್ಲ ಎಂದು ಸಾರ್ವಜನಿಕರು ಕೂಡಾ ತೀವ್ರ ಆಕ್ರೋಶ ಹೊರಹಾರಕಿದ್ದರು. ಅಲ್ಲದೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ಫ್ಲೆಕ್ಸ್ ಹಾಗೂ ಹೋರ್ಡಿಂಗ್‌ಗಳನ್ನು ತೆರವು ಮಾಡುವಂತೆ ಆ.2 ರಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶ ಕೊಟ್ಟಿತ್ತು. ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯುವ ನಿಟ್ಟಿನಲ್ಲಿ ಪಂಚವಾರ್ಷಿಕ ಯೋಜನೆ ಬೇಕೇ? ಹಾಗೂ ಫ್ಲೆಕ್ಸ್ ತೆರವಿಗೆ ಶುಭ ವೇಳೆಗಾಗಿ ಕಾಯುತ್ತಿದ್ದೀರಾ? ಎಂದು ಹೈಕೋರ್ಟ್ ಇತ್ತೀಚಿಗೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ಇದಾದ ಬಳಿಕ ಬಿಬಿಎಂಪಿ ನಗರದಲ್ಲಿ ಬೃಹತ ಕಾರ್ಯಾಚರಣೆ ನಡೆಸಿ 59 ಸಾವಿರ ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:44 pm, Sat, 11 May 24