AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್‌ನಲ್ಲಿ ಅನಧಿಕೃತ ಪಿಜಿಗಳ ದರ್ಬಾರ್: ಬ್ಯಾಗಡದೇನಹಳ್ಳಿ ಗ್ರಾ.ಪಂ. ಅಧಿಕಾರಿಗಳಿಂದ 18 ಕಟ್ಟಡಗಳು ಸೀಜ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ಅಕ್ರಮವಾಗಿ ನಡೆಸುತ್ತಿದ್ದ ಪಿಜಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಾಣ ಹಂತದಲ್ಲಿದ್ದ 18 ಅನಧಿಕೃತ ಕಟ್ಟಡಗಳನ್ನು ಸೀಜ್ ಮಾಡಲಾಗಿದ್ದು, ವಿದ್ಯಾರ್ಥಿಗಳು ವಾಸವಿರುವ 12 ಪಿಜಿಗಳಿಗೆ ತೆರವುಗೊಳಿಸಲು ಒಂದು ವಾರದ ಗಡುವು ನೀಡಿ ನೋಟಿಸ್ ನೀಡಲಾಗಿದೆ.

ಆನೇಕಲ್‌ನಲ್ಲಿ ಅನಧಿಕೃತ ಪಿಜಿಗಳ ದರ್ಬಾರ್: ಬ್ಯಾಗಡದೇನಹಳ್ಳಿ ಗ್ರಾ.ಪಂ. ಅಧಿಕಾರಿಗಳಿಂದ 18 ಕಟ್ಟಡಗಳು ಸೀಜ್!
ಬ್ಯಾಗಡದೇನಹಳ್ಳಿ ಗ್ರಾ.ಪಂ. ಅಧಿಕಾರಿಗಳಿಂದ 18 ಪಿಜಿಗಳು ಸೀಜ್
ರಾಮು, ಆನೇಕಲ್​
| Edited By: |

Updated on: Oct 05, 2026 | 12:47 PM

Share

ಮುಖ್ಯಾಂಶಗಳು

  • ಆನೇಕಲ್‌ನಲ್ಲಿ ಅನಧಿಕೃತ ಪಿಜಿಗಳ ಮೇಲೆ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ನಿರ್ಮಾಣ ಹಂತದ 18 ಕಟ್ಟಡಗಳು ಸೀಜ್, 12 ಪಿಜಿಗಳಿಗೆ ನೋಟಿಸ್.
  • ಜಿ+2 ಅನುಮತಿ ಪಡೆದು 8 ಅಂತಸ್ತು ಕಟ್ಟಿ ತೆರಿಗೆ ವಂಚನೆ.

ಬೆಂಗಳೂರು, ಅಕ್ಟೋಬರ್ 05: ಜಿಲ್ಲೆಯ ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಅನಧಿಕೃತ ಪಿಜಿ ಹಾಗೂ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರತಿಷ್ಠಿತ ಅಲಯನ್ಸ್ ಕಾಲೇಜು ಸಮೀಪದ ಈಡನ್ ಗಾರ್ಡನ್, ನಕ್ಷತ್ರ ಹಾಗೂ ಸಾಯಿ ಬಡಾವಣೆಗಳಲ್ಲಿ ಐದಾರು ವರ್ಷಗಳಿಂದ ತಲೆಯೆತ್ತಿರುವ 28ಕ್ಕೂ ಹೆಚ್ಚು ಅನಧಿಕೃತ ಪಿಜಿಗಳ ವಿರುದ್ಧ ಪಿಡಿಒ ನಾಗರಾಜ್ ನೇತೃತ್ವದಲ್ಲಿ ಕಟ್ಟುನಿಟ್ಟಿನ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಸರ್ಕಾರಕ್ಕೆ ತೆರಿಗೆ ವಂಚನೆ

ಗ್ರಾಮ ಪಂಚಾಯಿತಿ, ಯೋಜನಾ ಪ್ರಾಧಿಕಾರ, ಬೆಸ್ಕಾಂ ಹಾಗೂ ಅಗ್ನಿಶಾಮಕ ದಳದಿಂದ ಯಾವುದೇ ನಿರಾಕ್ಷೇಪಣಾ ಪತ್ರ (NOC) ಪಡೆಯದೆ ವಾಣಿಜ್ಯ ಉದ್ದೇಶಕ್ಕೆ ಕಟ್ಟಡಗಳನ್ನು ಬಳಸಲಾಗುತ್ತಿತ್ತು. ಜಿ+2 ಅಂತಸ್ತಿಗೆ ಅನುಮತಿ ಪಡೆದು, ನಿಯಮ ಉಲ್ಲಂಘಿಸಿ 7 ರಿಂದ 8 ಅಂತಸ್ತಿನ ಬೃಹತ್ ಕಟ್ಟಡಗಳನ್ನು ನಿರ್ಮಿಸಲಾಗಿತ್ತು. ಹೊರರಾಜ್ಯ ಮೂಲದ ಮಾಲೀಕರು ವಿದ್ಯಾರ್ಥಿಗಳಿಂದ ತಿಂಗಳಿಗೆ 10,000 ರೂಪಾಯಿಯಿಂದ 15,000 ರೂಪಾಯಿಯವರೆಗೆ ಶುಲ್ಕ ವಸೂಲಿ ಮಾಡುತ್ತಿದ್ದು, ಜನವಸತಿ ಗೃಹಗಳೆಂದು ಸುಳ್ಳು ಹೇಳಿ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿದ್ದರು. ಅಲ್ಲದೆ, ಕೊಳಚೆ ನೀರು ಮತ್ತು ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಭದ್ರತೆ ಹಾಗೂ ಸಿಸಿಟಿವಿ ಇಲ್ಲದೆ ಯುವತಿಯರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯೂ ಪ್ರಶ್ನಾರ್ಹವಾಗಿತ್ತು.

ಇದನ್ನೂ ಓದಿ ಬೆಂಗಳೂರಿನ ಅಕ್ರಮ ಪಿಜಿಗಳ ವಿರುದ್ಧ ಜಿಬಿಎ ಸಮರ: ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ಮೂಲಸೌಕರ್ಯಗಳು ಕಟ್!

12 ಅಕ್ರಮ ಪಿಜಿಗಳಿಗೆ ನೋಟಿಸ್ ಜಾರಿ

ಈ ಹಿನ್ನೆಲೆಯಲ್ಲಿ ಗ್ರಾ.ಪಂ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿರ್ಮಾಣ ಹಂತದಲ್ಲಿದ್ದ 18 ಅನಧಿಕೃತ ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳು ವಾಸವಿರುವ 12 ಅಕ್ರಮ ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ತೆರವುಗೊಳಿಸಲು 1 ವಾರದ ಗಡುವು ನೀಡಿದ್ದಾರೆ. “ಕಾನೂನು ಉಲ್ಲಂಘನೆ ಕುರಿತು ಹತ್ತಾರು ಬಾರಿ ನೋಟಿಸ್ ನೀಡಿದ್ದರೂ ಮಾಲೀಕರು ಸ್ಪಂದಿಸಿರಲಿಲ್ಲ. ಬೆಸ್ಕಾಂಗೆ ಪತ್ರ ಬರೆದರೂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ. ಪೊಲೀಸರು ಕೂಡ ಎಫ್‌ಐಆರ್ ದಾಖಲಿಸುತ್ತಿರಲಿಲ್ಲ. ಹೀಗಾಗಿ ಸೀಜ್ ಕ್ರಮ ಕೈಗೊಳ್ಳಲಾಗಿದ್ದು, ಗಡುವು ಮುಗಿದ ನಂತರ ತೆರವು ಕಾರ್ಯಾಚರಣೆ ನಡೆಸಲಾಗುವುದು,” ಎಂದು ಪಿಡಿಒ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!