Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ: ಕಲ್ಲು ಕ್ವಾರಿ ಮಾಫಿಯಾಕ್ಕೆ ಬಲಿಯಾದ್ರಾ ಪ್ರತಿಮಾ?

ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನ ಮನೆಗೆ ನುಗ್ಗಿ ಮಹಿಳಾಧಿಕಾರಿಯನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆ ಹಿಂದೆ ಮಾಫಿಯಾ ಕೈವಾಡವಿದ್ಯಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಹೌದು  ಕಲ್ಲು ಕ್ವಾರಿಯನ್ನು ಸ್ಥಗಿತಗೊಳಿಸಿದ್ದಕ್ಕೆ ಡಿಡಿ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ: ಕಲ್ಲು ಕ್ವಾರಿ ಮಾಫಿಯಾಕ್ಕೆ ಬಲಿಯಾದ್ರಾ ಪ್ರತಿಮಾ?
ಪ್ರತಿಮಾ, ಕೊಲೆಯಾದ ಅಧಿಕಾರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 05, 2023 | 3:14 PM

ಬೆಂಗಳೂರು (ನವೆಂಬರ್ 05): ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆಯಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (45) ಎಂಬವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಈ ಹತ್ಯೆ ಹಿಂದೆ ಮಾಫಿಯಾ ಕೈವಾಡವಿದ್ಯಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಹೌದು  ಕಲ್ಲು ಕ್ವಾರಿಯನ್ನು ಸ್ಥಗಿತಗೊಳಿಸಿದ್ದಕ್ಕೆ ಡಿಡಿ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಲೇಡಿ ಅಧಿಕಾರಿಯ ಬರ್ಬರ ಹತ್ಯೆ, ಕಾರಣವೇನು?

ಬೆಂಗಳೂರು ನಗರ ಜಿಲ್ಲೆ ಹುಣಸಮಾರನಹಳ್ಳಿ ಗ್ರಾಮದ ಸರ್ವೆ ನಂ 177,179 ಭಾಗದಲ್ಲಿ ಅಕ್ರಮ ಗಣಿಗಾರಿಕೆಯ ದೂರು ಬಂದಿತ್ತು. ಲೈಸನ್ಸ್ ಪಡೆಯದ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಅಲ್ಲದೇ ಕಲ್ಲು ಬಂಡೆಗಳನ್ನ ಅಕ್ರಮವಾಗಿ ಬ್ಲಾಸ್ಟ್ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರತಿಮಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಿದ್ದರು.

ಇಲ್ಲಿ ಇನ್ಮುಂದೆ ಅಕ್ರಮ ಕಲ್ಲು ಗಣಿಗಾರಿಕೆ ಮಾಡುವಂತಿಲ್ಲ ಎಲ್ಲಾ ಸ್ಥಗಿತಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಮಾ ಅವರನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಟಿವಿ9ಗೆ ಪ್ರತಿಮಾ ಅವರು ಕೆಲಸ ಮಾಡುತ್ತಿದ್ದ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ಹಂತಕರ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಈ ಹೇಳಿಕೆಯಂತೆ ಅಕ್ರಮ ಕಲ್ಲು ಗಣಿಗಾರಿಕೆ ಸ್ಥತಗಿತಗೊಳಿಸಿದ ಕೋಪಕ್ಕೆ ಪ್ರತಿಮಾ ಅವರನ್ನು ಹತ್ಯೆ ಮಾಡಿದ್ರಾ? ಹಾಗಾದ್ರೆ, ಯಾರು ಅವರು? ಆ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದವರು ಯಾರು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿ ವಿಚಾರಣೆಗೊಳಪಡಿಸಬೇಕಿದೆ.

Published On - 3:12 pm, Sun, 5 November 23