ಬೆಂಗಳೂರು ವೋಟರ್​ ಐಡಿ ಹಗರಣದ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿಎಂ ಬೊಮ್ಮಾಯಿ

| Updated By: ವಿವೇಕ ಬಿರಾದಾರ

Updated on: Nov 19, 2022 | 11:04 PM

ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣಿಯ ಯಾವುದೇ ಜವಾಬ್ದಾರಿಯನ್ನು ನೀಡಿರುವುದಿಲ್ಲ, ಕೇವಲ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಆದೇಶ ನೀಡಲಾಗಿರುತ್ತದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮೊಯಿ ಹೇಳಿದ್ದಾರೆ.

ಬೆಂಗಳೂರು ವೋಟರ್​ ಐಡಿ ಹಗರಣದ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ (Voter ID) ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗುತ್ತಿದೆ. ಪ್ರತಿಪಕ್ಷವು ಇದನ್ನು ಅಸ್ತ್ರವಾಗಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಪ್ರಯತ್ನಿಸಿತು. ಆದರೆ ರಾಜ್ಯ ಬಿಜೆಪಿ ಸರ್ಕಾರ ತಿರುಗೇಟು ನೀಡಿತು. ಈ ಹಗರಣದ ಕುರಿತು ಮೊದಲ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮೊಯಿ (Basavaraj Bommai) “ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣಿಯ ಯಾವುದೇ ಜವಾಬ್ದಾರಿಯನ್ನು ನೀಡಿರುವುದಿಲ್ಲ, ಕೇವಲ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಆದೇಶ ನೀಡಲಾಗಿರುತ್ತದೆ” ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ನೀಡಿದ PSE ದತ್ತಾಂಶ ಮತ್ತು ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಿ, ಸರ್ಕಾರಿ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಿ, ಒದಗಿಸಿದ ವರದಿಯನ್ನು ಆಧರಿಸಿ ಮತದಾರರನ್ನು ಕೈಬಿಡಲಾಗಿರುತ್ತದೆ. ಆದರೆ ವಾಸ್ತವವಾಗಿ, 2017ರಲ್ಲಿ ಅಂದಿನ ಸಿದ್ದರರಾಮಯ್ಯನವರ ಕಾಂಗ್ರೇಸ್ ಸರ್ಕಾರವು ಚಿಲುಮೆ ಸಂಸ್ಥೆಗೆ ಮತದಾರರ ಪರಿಷ್ಕರಣೆ ಕಾರ್ಯವನ್ನು ಹಾಗೂ ಕೆಲವು ಕಡೆ ಬಿ.ಎಲ್.ಓಗಳನ್ನೂ ಕೂಡ ಭರ್ತಿಮಾಡಿಕೊಳ್ಳುವ ಕಾರ್ಯನಿರ್ವಹಿಸುವ ಗುರುತರ ಜವಾಬ್ದಾರಿಯನ್ನೂ ಕಾನೂನು ಬಾಹಿರವಾಗಿ ನೀಡಲಾಗಿರುತ್ತದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ