ಮತದಾರರ ಪಟ್ಟಿ ಅಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ಗೆ ಸಂಕಷ್ಟ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಹೀಗಾಗಿ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.
ಬೆಂಗಳೂರು, ಅ.03: ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಸಿಎಂ (Siddaramaiah) ಸೂಚನೆ ಮೇರೆಗೆ ಸಿಎಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಿಎಸ್ ಕೋರಿದೆ. ಆಗಸ್ಟ್ ತಿಂಗಳಲ್ಲೇ ಸರ್ಕಾರ ವರದಿ ಕೇಳಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮತದಾನದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‌ಓ ( ಬೂತ್ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ಹೋಗಿ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕಿತ್ತು. ಅಲ್ಲದೆ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ. ಇನ್ನು ಈ ವೇಳೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದರು. ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ: ಮತದಾರರ ಖಾಸಗಿ ವಿಷಯ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಅವಕಾಶ; ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ಆಗ್ರಹ
ಎಂಎಲ್ಸಿ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಮತದಾರರ ಖಾಸಗಿ ವಿಷಯ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಅವಕಾಶ ನೀಡಿದ ಆರೋಪದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಅದರಂತೆ ಈಗ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:39 am, Tue, 3 October 23