ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್​ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಇದೀಗ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ‌ ಸಲಹೆಗಾರ ರಘು ಜಿ.ಪಿ ಎಂಬುವವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್
ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 07, 2024 | 6:49 PM

ಬೆಂಗಳೂರು, ಅ.07: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ(Covid Scam) ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ‌ ಸಲಹೆಗಾರ ಮತ್ತು ಇಲಾಖೆಯ ಜಂಟಿ ನಿಯಂತ್ರಕರೂ ಆಗಿದ್ದ ರಘು ಜಿ.ಪಿ ಎಂಬುವವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್​ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು.

ಇದನ್ನೂ ಓದಿ:ಬಿಜೆಪಿ ಅವಧಿಯಲ್ಲಿನ ಕೋವಿಡ್ ಹಗರಣದ ವರದಿ ಸಲ್ಲಿಕೆ: ಅಂದಿನ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಿಷ್ಟು

ಇದರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ವಿರುದ್ಧ ಅಕ್ರಮ ನಡೆಸಿರುವ ಆರೋಪ ಮಾಡಲಾಗಿತ್ತು. ವೆಂಟಿಲೇಟರ್‌,  ನಿರ್ವಹಣೆ ಲೋಪ, ಆಕ್ಸಿಜನ್‌ ಉಪಕರಣಗಳ ಖರೀದಿ, ಕೋವಿಡ್‌-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿತ್ತು. ಇದೀಗ ಓರ್ವ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿದೆ.

ಮಧ್ಯಂತರ ವರದಿ?

ಇನ್ನು ಈ ವರದಿಯಲ್ಲಿ ಆಗಸ್ಟ್ 25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗದಿಂದ ಬಿಬಿಎಂಪಿ ವಿವಿಧ ವಲಯಗಳು ಹಾಗೂ ಇಲಾಖಾವಾರು ಭರಿಸಿರುವ ವೆಚ್ಚದ ಮಾಹಿತಿ ಉಲ್ಲೇಖಿಸಲಾಗಿದೆ. ಆರೋಗ್ಯ ಇಲಾಖೆಗೆ 1,754 ಕೋಟಿ ರೂ, ರಿಲೀಸ್ ಮಾಡಲಾಗಿತ್ತು. ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ 1,406 ಕೋಟಿ ರೂ., ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ₹918 ಕೋಟಿ ರೂ., ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ 1,394 ಕೋಟಿ ರೂ. ವೈದ್ಯಕೀಯ ಸಲಕರಣೆಗಳ ಖರೀದಿಗೆ 1,394 ಕೋಟಿ ರೂ., ಔಷಧಗಳ ಖರೀದಿಗೆ 569 ಕೋಟಿ ರೂಪಾಯಿ ಸೇರಿದಂತೆ ವಿವಿಧ ವಲಯಗಳಿಗೆ ಹಣ ಬಿಡುಗಡೆ​ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Mon, 7 October 24

ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ