AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ

ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಆಯೇಷಾ ಬಾನು
|

Updated on:Mar 18, 2021 | 2:04 PM

Share

ಬೆಂಗಳೂರು: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಅನಿಸಿಕೆ ಹೊರ ಹಾಕಿದ್ದಾರೆ. ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಸ್ಪರ್ಧಿಸಬೇಕೆ ಎಂದು ಒಂದು ಕಡೆ ಸಿದ್ದರಾಮಯ್ಯ ಪ್ರಯತ್ನ ಪಟ್ರೆ ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಂದಲೂ ಒತ್ತಡ ಹೆಚ್ಚಾಗುತ್ತಿತ್ತು. ಅಲ್ಲದೆ ಸತೀಶ್ ಜಾರಕಿಹೊಳಿಯನ್ನು ಕಣಕ್ಕಿಳಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಸೂಚನೆ ಬಂದಿತ್ತು. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಮಾತ್ರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯ ಈಗ ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ತಾವು ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದಿದ್ದಾರೆ.

ಸತೀಶ್ ಕಣಕ್ಕಿಳಿದರೆ ಸಹೋದರರಿಂದಲೇ ಪರೋಕ್ಷವಾಗಿ ಸಹಾಯ ಸಿಗಬಹುದೆಂದು ‘ಕೈ’ ಲೆಕ್ಕಾಚಾರ ಹಾಕಿಕೊಂಡಿದೆ. ಜೊತೆಗೆ ಲಿಂಗಾಯತ ಸಮುದಾಯದ ಹೊರತಾಗಿ ಅಹಿಂದ ಮತಗಳು ಕ್ರೋಡೀಕರಣವಾಗುತ್ತೆಂಬ ಲೆಕ್ಕಾಚಾರವಿದೆ. ಸಂಪನ್ಮೂಲ ಕ್ರೋಡೀಕರಣದಲ್ಲೂ ಸತೀಶ್ ಎತ್ತಿದ ಕೈ ಎಂಬುವುದು ಕೈ ನಾಯಕರ ನಿಲುವು. ಸತೀಶ್ ಜಾರಕಿಹೊಳಿಗಿಂತ ಬೇರೆ ಉತ್ತಮ ಅಭ್ಯರ್ಥಿ ಇಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿತ್ತು.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

Published On - 1:18 pm, Thu, 18 March 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್