ಕರ್ನಾಟಕದಲ್ಲಿ ಮೇ ಅಂತ್ಯಕ್ಕೇ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿ
ಪ್ರತಿವರ್ಷ ಜೂನ್ 1 ಅಥವಾ ಅದರ ಬಳಿಕ ಕೇರಳದ ಕರಾವಳಿಯಲ್ಲಿ ಮುಂಗಾರು ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮೇ 27ಕ್ಕೆ ಕೇರಳಕ್ಕೆ, ಬಳಿಕ 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರು: ರಾಜ್ಯದಲ್ಲಿ ಪ್ರತಿವರ್ಷ ಜೂನ್ ತಿಂಗಳಿನಲ್ಲಿ ಮುಂಗಾರು ಮಳೆ (Monsoon Rain) ಆರಂಭವಾಗುತ್ತಿತ್ತು. ಆದರೆ ಈ ಬಾರಿ ವಾಡಿಕೆಗಿಂತ ಮೊದಲೇ ಮಾನ್ಸೂನ್ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ. ಪ್ರತಿವರ್ಷ ಜೂನ್ 1 ಅಥವಾ ಅದರ ಬಳಿಕ ಕೇರಳದ ಕರಾವಳಿಯಲ್ಲಿ ಮುಂಗಾರು ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮೇ 27ಕ್ಕೆ ಕೇರಳಕ್ಕೆ, ಬಳಿಕ 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಮುಂಗಾರು ರಾಜ್ಯದ ಕರಾವಳಿ ಪ್ರದೇಶವಾದ ಮಂಗಳೂರಿಗೆ ಪ್ರವೇಶಿಸಿ, ಬಳಿಕ 3 ದಿನಗಳಲ್ಲಿ ದಕ್ಷಿಣ ಹಾಗೂ ಉತ್ತರ ಒಳನಾಡಿಗೆ ಪ್ರವೇಶಿಸುತ್ತದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ನಾಲ್ಕು ದಿನ ಮಳೆ: ಅಸಾನಿ ಚಂಡಮಾರುತದ ಅಬ್ಬರ ಕ್ಷೀಣಿಸಿದ್ದು, ಕರ್ನಾಟಕದಲ್ಲಿ ಇನ್ನೂ ಮಳೆ ಮುಂದುವರೆದಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ 2 ದಿನಗಳಿಂದ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.
ನೆಲಕ್ಕುರುಳಿದ ಭಾರಿ ಗಾತ್ರದ ಮರಗಳು: ದಾವಣಗೆರೆ: ಗಾಳಿ, ಮಳೆಗೆ ಭಾರಿ ಗಾತ್ರದ ಮರಗಳು ನೆಲಕ್ಕುರುಳಿದ್ದವು. ರಾಜ್ಯ ಹೆದ್ದಾರಿ 65 ರಲ್ಲಿ ಘಟನೆ ನಡೆದಿದ್ದು, ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ಲೋಕೋಪಯೋಗಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮರಗಳ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಇಪ್ಪತ್ತರಿಂದ ಮೂವತ್ತು ವರ್ಷಗಳ ಹಳೆಯದಾದ ಮರಳು ಗಾಳಿ ರಭಸಕ್ಕೆ ನೆಲಕ್ಕೆ ಉರುಳಿದ್ದವು.
Published On - 11:15 am, Sat, 14 May 22