AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ, ಮುಜರಾಯಿ ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಶಶಿಕಲಾ ಜೊಲ್ಲೆ

ರಾಜ್ಯದ 149 ತಾಲೂಕುಗಳ ವಕ್ಫ್ ಆಸ್ತಿ ಗೆಜೆಟ್ ಹೊರಡಿಸಲಾಗಿದೆ. ವಕ್ಫ್ ಇಲಾಖೆಯಲ್ಲಿ 355 ಸಿಬ್ಬಂದಿಯಿದ್ದು, ಇನ್ನು 84 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ, ಮುಜರಾಯಿ ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ
TV9 Web
| Edited By: sandhya thejappa|

Updated on: Aug 19, 2021 | 12:56 PM

Share

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ (Wakf Property) ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ವಕ್ಫ್ 1,05,885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32,192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ ಮಾಹಿತಿ ಇದೆ. ಈ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಆದಷ್ಟು ಬೇಗ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದ 149 ತಾಲೂಕುಗಳ ವಕ್ಫ್ ಆಸ್ತಿ ಗೆಜೆಟ್ ಹೊರಡಿಸಲಾಗಿದೆ. ವಕ್ಫ್ ಇಲಾಖೆಯಲ್ಲಿ 355 ಸಿಬ್ಬಂದಿಯಿದ್ದು, ಇನ್ನು 84 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಹಜ್ ಯಾತ್ರೆಗೆ ಪ್ರತಿ ವರ್ಷ ಹೋಗಲು ಅವಕಾಶ ಇದೆ. ಸೌದಿ ಅರೇಬಿಯಾಕ್ಕೆ ಹೋಗಲು ಬೇಕಾದ ಅವಶ್ಯಕ ಮಾಹಿತಿಯನ್ನು ಹಜ್ ಮಂಡಳಿ ಮಾಡುತ್ತದೆ. 1965 ರಲ್ಲಿ 8 ಜನ ಸದಸ್ಯರನ್ನೊಳಗೊಂಡ ಹಜ್ ಸಮಿತಿ ರಚನೆಯಾಗಿದೆ. 2019-2021 ರಲ್ಲಿ ಕೊವಿಡ್ ಕಾರಣದಿಂದ ಹಜ್ ಯಾತ್ರಿಕರು ಹಜ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ ಹಜ್ ಭವನವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ ಎಲ್ಲ ಸಮುದಾಯದವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲೀಂ ಸಮುದಾಯದವರಿಗೆ ಶೇ.5 ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು. ವಕ್ಫ್ ಮಂಡಳಿಗೆ ಈ ಸಾರಿ 1.74 ಕೋಟಿ ರೂ. ಅನುದಾನ ನೀಡಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ನೀಡುವುದು ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ ಎಲ್ಲರಿಗೂ ಯೋಜನೆ ತಲುಪಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾನಿಪ್ಪಾಡಿ ನೀಡಿರುವ ವರದಿ ಇನ್ನೂ ನೋಡಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಯಾತ್ರಿ ನಿವಾಸ ನಿರ್ಮಾಣಕ್ಕೆ ಕ್ರಮ ರಾಜ್ಯದಲ್ಲಿರುವ ದೇವಸ್ಥಾನಗಳು, ಹೊರ ರಾಜ್ಯದಲ್ಲಿರುವ ದೇವಸ್ಥಾನಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇವಸ್ಥಾನಗಳ ಆಸ್ತಿ ಸಮೀಕ್ಷೆ ಹಾಗೂ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ 34,563 ಮುಜರಾಯಿ ದೇವಸ್ಥಾನಗಳಿವೆ. 25 ಲಕ್ಷ ವರಮಾನ ಮೀರಿದ ದೇವಸ್ಥಾನಗಳನ್ನು ಎ ಕೆಟಗೆರಿ, 5 ಲಕ್ಷ ಮೇಲ್ಪಟ್ಟು ವರಮಾನ ಇರುವ ದೇವಸ್ಥಾನಗಳನ್ನು ಬಿ ಹಾಗೂ 5 ಲಕ್ಷಕ್ಕಿಂತ ಕಡಿಮೆ ವರಮಾನ ಇರುವ ದೇವಸ್ಥಾನಗಳನ್ನು ಸಿ ಕೆಟಗೆರಿಯಲ್ಲಿ ವಿಂಗಡಿಸಲಾಗಿದೆ.

ಇದಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿ 25 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು. ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯ ಒದಗಿಸುವ ಕೆಲಸ ಮಾಡಲಾಗುವುದು. ರಾಜ್ಯದ ಯಾವ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅವಕಾಶ ಇದೆ ಎನ್ನುವುದನ್ನು ವರದಿ ನೀಡಲಿ ಸೂಚಿಸಿದ್ದೇನೆ. ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶದ ಶ್ರೀಶೈಲಂ, ತಿರುಪತಿ, ಮರಾಹಾಷ್ಟ್ರದ ಫಂಡರಪುರ, ತುಳಜಾಭವಾನಿ, ಗುಡ್ಡಾಪುರ ದಾನಮ್ಮ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಮುಜರಾಯಿ ಇಲಾಖೆಯ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಸಪ್ತಪದಿ ಯೋಜನೆ ಮುಂದುವರೆಸಲು ತೀರ್ಮಾನ ಹಿಂದಿನ ಮುಜರಾಯಿ ಸಚಿವರು ಸಪ್ತಪದಿ ಯೋಜನೆ ಜಾರಿಗೆ ತಂದಿದ್ದಾರೆ. ಅದನ್ನು ಮುಂದುವರೆಸಲು ತೀರ್ಮಾನಿಸಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಇದರ ಪ್ರಚಾರ ಕಡಿಮೆ ಇದೆ. ಹೆಚ್ಚಿನ ಪ್ರಚಾರ ಮಾಡಿ ಸಪ್ತಪದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮುಜರಾಯಿ ಇಲಾಖೆಯಲ್ಲಿಯೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ

3 ದಿನದಿಂದ ರಸ್ತೆ ಮಧ್ಯೆಯೇ ಕೆಟ್ಟು ನಿಂತಿರುವ ಕೆಎಸ್​ಆರ್​​ಟಿಸಿ ಬಸ್; ಕೆಸರುಗದ್ದೆಯಾದ ನಗರ ರಸ್ತೆ, ಭತ್ತ ನಾಟಿ ಮಾಡಿದ ಸ್ಥಳೀಯರು

ವಿಶ್ವದ ಅತಿದೊಡ್ಡ ಕೆನ್ನೆ ಹೊಂದಿರುವ ಈಕೆ ಮೊದಲು ಹೇಗಿದ್ದಳು ಗೊತ್ತೇ? ಕಾಸ್ಮೆಟಿಕ್ ಶಸ್ತ್ರ ಚಿಕಿತ್ಸೆ ಪಡೆದು ಹೇಗಾಗಿದ್ದಾಳೆ ನೋಡಿ

(immediate action to resolve the Wakf Property Case said Shashikala Jolle)

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ