Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು(ಡಿ.08) ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು

ಇಂದು (ಡಿ.8) ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಸಭೆಯಲ್ಲಿ ಸಮ್ಮತಿ ಸಿಕ್ಕಿದ್ದು, ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

ಇಂದು(ಡಿ.08) ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು
ಸಚಿವ ಮಾಧುಸ್ವಾಮಿ
Follow us
TV9 Web
| Updated By: ಡಾ. ಭಾಸ್ಕರ ಹೆಗಡೆ

Updated on:Dec 08, 2022 | 5:23 PM

ಬೆಂಗಳೂರು: ಇಂದು (ಡಿ.08) ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ (Law Minister Madhuswamy) ಮಾಹಿತಿ ನೀಡಿದ್ದಾರೆ. 23 ಸಾವಿರ ಕೋಟಿ ರೂಪಾಯಿಯ ಪರಿಷ್ಕೃತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಪುಟ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಯೋಜನೆ ಆರಂಭವಾದಾಗ 15 ಸಾವಿರ ಕೋಟಿ ಅಂದಾಜು ಮಾಡಲಾಗಿತ್ತು. ಆದರೆ ಈಗ 23 ಸಾವಿರ ಕೋಟಿಗೆ ಬಂದು ನಿಂತಿದೆ. ಯೋಜನೆಗೆ ಸಂಬಂಧಿಸಿದ 99% ಟೆಂಡರ್​ಗಳು ನೀಡಲಾಗಿದೆ. ಬಳ್ಳಾರಿ ವಿಮ್ಸ್​ ಆಸ್ಪತ್ರೆಗೆ 108 ಕೋಟಿ ರೂ. ಅನುದಾನ ನೀಡಿದ್ದು, 2ನೇ ಹಂತದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಣಕಾಸು ವೆಚ್ಚ ನೀಡಲಾಗಿದೆ. ಆಸ್ಪತ್ರೆಯಲ್ಲಿ 200 ಹೆಚ್ಚುವರಿ ಹಾಸಿಗೆ ನಿರ್ಮಾಣಕ್ಕೆ ಅನುಮೋದಿಸಲಾಗಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾದಲ್ಲಿ ಅಂದಾಜು 15 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ನಿರ್ಮಾಣ ಮಾಡಲಾಗುವುದು. ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ 1,000 ಬೆಡ್​ಗಳುಳ್ಳ ನೂತನ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಸತ್ತೂರು ಗ್ರಾಮದಲ್ಲಿ ವಸತಿ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ

ಸತ್ತೂರು ಗ್ರಾಮದಲ್ಲಿ ವಸತಿ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಸತ್ತೂರಿನಲ್ಲಿ 258 ಎಕರೆಯಲ್ಲಿ ನಿವೇಶನಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ನಾರಾಯಣಪುರ ಉಪಕಾಲುವೆ ನಿರ್ಮಿಸಲು ಸಂಪುಟ ಒಪ್ಪಿಗೆ ನೀಡಿದೆ. ದೇವದುರ್ಗದ ಬಳಿ ಆರು ಕಾಲುವೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. 253 ಕೋಟಿ ರೂಪಾಯಿ ವೆಚ್ಚಕ್ಕೆ ಅನುದಾನ. ಸೇಡಂ-ಚಿಂಚೋಳಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ 13.82 ಕೋಟಿ ರೂಪಾಯಿ ಅನುದಾನ ನೀಡಲು ತೀರ್ಮಾನ. ತುಂಗಾ ನದಿಗೆ ಹೊಸ ಸೇತುವೆ ನಿರ್ಮಿಸಲು ಸಂಪುಟ ಒಪ್ಪಿದ್ದು, ಇದಕ್ಕಾಗಿ 25.6 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ. ಲಾನ್ ಟೆನಿಸ್ ಅಸೋಸಿಯೇಷನ್‌ಗೆ ತಿಮ್ಮಸಂದ್ರದಲ್ಲಿ 7 ಎಕರೆ ಭೂಮಿ ನೀಡಲು ಸಂಪುಟ ಸಭೆ ನಿರ್ಧಾರ ಮಾಡಿದೆ ಎಂದರು.

ಇದನ್ನೂ ಓದಿ: ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ

ವಿದ್ಯುತ್ ಕಂಪನಿಗಳ ನಷ್ಟ ಭರಿಸಲು ಸರ್ಕಾರ ತೀರ್ಮಾನ

ಇನ್ನು ವಿದ್ಯುತ್ ಕಂಪನಿಗಳ ನಷ್ಟ ಭರಿಸಲು ಸಂಪುಟ ಸಭೆ ನಿರ್ಧರಿಸಿದ್ದು, ಸರ್ಕಾರದಿಂದ 8,064 ಕೋಟಿ ರೂಪಾಯಿ ಹಣಕಾಸು ನೆರವು ನೀಡಲಾಗುತ್ತಿದೆ. ಅಮೃತ ಸ್ವಾಭಿಮಾನ ಯೋಜನೆ ಅನುಷ್ಠಾನಕ್ಕೂ ಸಂಪುಟ ಒಪ್ಪಿಗೆ ನೀಡಿದ್ದು, ಯೋಜನೆಯಡಿ 92 ಕೋಟಿ ರೂ. ಸಹಾಯಧನ ಘೋಷಣೆ ಮಾಡಲಾಗಿದೆ. ಕೆಇಬಿಗೆ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಖಾತರಿಯಾಗಿದ್ದು, 3,000 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಖಾತರಿ ಪಡಿಸಿದೆ. ಪ್ರತಿ ಕುರಿಗಾಹಿ 20 ಕುರಿ ಸಾಕಲು ಅವಕಾಶವಿದ್ದು, ಕುರಿಗಾಹಿಗಳಿಗೆ 1 ಲಕ್ಷ 70 ಸಾವಿರ ಸಹಾಯಧನ ನೀಡಲಾಗುತ್ತೆ. ಬಿಎಂಟಿಸಿಗೆ 921 ಹೊಸ ಎಲೆಕ್ಟ್ರಿಕ್ ಬಸ್ ಖರೀದಿಗೆ ಒಪ್ಪಿಗೆ ಸೂಚಿಸಿದ್ದು, ಕೇಂದ್ರದ ಸಹಾಯಧನ ನೆರವಿನಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದರು.

42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸಿಗೆ ನಿರ್ಧಾರ

ಒಲಿಂಪಿಕ್ಸ್‌, ಕಾಮನ್‌ವೆಲ್ತ್‌ ಗೇಮ್ಸ್‌, ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಸರ್ಕಾರದಿಂದ ನೇರ ನೇಮಕಾತಿಗೆ ನಿರ್ಧರಿಸಲಾಗಿದೆ. ಎ, ಬಿ, ಸಿ ಗ್ರೂಪ್‌ನಡಿ ಉದ್ಯೋಗ ನೀಡಲು ತಿರ್ಮಾನಿಸಲಾಗಿದೆ. ಇನ್ನು ಅದೇ ರೀತಿಯಾಗಿ 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸಿಗೆ ನಿರ್ಧಾರ ಮಾಡಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆ ಸನ್ನಡತೆ ಆಧಾರದಲ್ಲಿ ಕೈದಿಗಳ ರಿಲೀಸ್‌ ಮಾಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:18 pm, Thu, 8 December 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು