AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ

ಲೋಕಸಭಾ ಚುನಾವಣೆ(Lok sabha election) ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ಇಂದು(ಮಾ.21) ಬೆಂಗಳೂರಿನ ಬಿಟಿಎಂ ಲೇಔಟ್‌(BTM Layout)ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
ಬೆಂಗಳೂರಿನಲ್ಲಿ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 21, 2024 | 6:42 PM

Share

ಬೆಂಗಳೂರು, ಮಾ.21: ಲೋಕಸಭಾ ಚುನಾವಣೆ(Lok sabha election) ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ಇಂದು(ಮಾ.21) ಬೆಂಗಳೂರಿನ ಬಿಟಿಎಂ ಲೇಔಟ್‌(BTM Layout)ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ.

ನಾಯಕನಹಟ್ಟಿ ಚೆಕ್​ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಸಾಗಿಸ್ತಿದ್ದ 38 ಲಕ್ಷ ರೂ. ಜಪ್ತಿ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಬಳಿಯ ನಾಯಕನಹಟ್ಟಿ ಚೆಕ್​ಪೋಸ್ಟ್​ನಲ್ಲಿ ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 38ಲಕ್ಷ ರೂಪಾಯಿಯನ್ನ ಎಫ್​ಎಸ್​ಟಿ ಟೀಮ್ ವಶಕ್ಕೆ ಪಡೆದಿದೆ. ಸೂಟ್​ಕೇಸ್​ನಲ್ಲಿ ಹಣ ಇಟ್ಟು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದರು. ಕಾರು ತಪಾಸಣೆ ವೇಳೆ ಹಣ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಎಸ್​ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿವೈಎಸ್​ಪಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ

KSRTC ಬಸ್‌ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ 243 ಗ್ರಾಂ ಚಿನ್ನ ಜಪ್ತಿ

ಚಿಕ್ಕಮಗಳೂರು: ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ 20 ಸಾವಿರ ಮೌಲ್ಯದ ಚಿನ್ನಾಭರಣ, ಮುತ್ತು ಹಾಗೂ ಹರಳುಗಳನ್ನು ಸೀಜ್‌ ಮಾಡಲಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಜೊತೆಗೆ ಓರ್ವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್