ಬೆಂಗಳೂರು, ಮಾ.21: ಲೋಕಸಭಾ ಚುನಾವಣೆ(Lok sabha election) ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ಇಂದು(ಮಾ.21) ಬೆಂಗಳೂರಿನ ಬಿಟಿಎಂ ಲೇಔಟ್(BTM Layout)ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಬಳಿಯ ನಾಯಕನಹಟ್ಟಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 38ಲಕ್ಷ ರೂಪಾಯಿಯನ್ನ ಎಫ್ಎಸ್ಟಿ ಟೀಮ್ ವಶಕ್ಕೆ ಪಡೆದಿದೆ. ಸೂಟ್ಕೇಸ್ನಲ್ಲಿ ಹಣ ಇಟ್ಟು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದರು. ಕಾರು ತಪಾಸಣೆ ವೇಳೆ ಹಣ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿವೈಎಸ್ಪಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ
ಚಿಕ್ಕಮಗಳೂರು: ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ 20 ಸಾವಿರ ಮೌಲ್ಯದ ಚಿನ್ನಾಭರಣ, ಮುತ್ತು ಹಾಗೂ ಹರಳುಗಳನ್ನು ಸೀಜ್ ಮಾಡಲಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಜೊತೆಗೆ ಓರ್ವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ