ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದಾದ ಮೂರು ತಿಂಗಳ ಬಳಿಕ ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ(Fake bomb threat)ಇ-ಮೇಲ್ ಬಂದಿದೆ.

ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ
ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 13, 2024 | 7:36 PM

ಬೆಂಗಳೂರು, ಆ.13: ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ(Fake bomb threat)ಇ-ಮೇಲ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ಆಗಿತ್ತು.

ಇದನ್ನೂ ಓದಿ:ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ, ಬಾಂಬ್ ಸ್ಕ್ವಾಡ್ ಕರೆಯಿಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹೋಟೆಲ್‌ಗಳ ಮುಂದೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಆಗಿ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಬಾಂಬ್​ ಬೆದರಿಕೆ ಇಮೇಲ್​ ಖಾಸಗಿ ಕಂಪನಿಯೊಂದಕ್ಕೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
Loading...
Unable to load recommendations.
Follow Us