AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ

ಬೆಂಗಳೂರು ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ
ಕಮಿಷನರ್ ದಯಾನಂದ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:Oct 10, 2023 | 1:01 PM

Share

ಬೆಂಗಳೂರು ಅ.10: ಇತ್ತೀಚಿಗೆ ಬೆಂಗಳೂರು ಪೊಲೀಸರು ಅತಿದೊಡ್ಡ ಸೈಬರ್​​ ಕ್ರೈಮ್ (Cyber Crime)​​ ಜಾಲವೊಂದನ್ನು ಭೇದಿಸಿದ್ದರು. ಈ ಜಾಲದಲ್ಲಿ ಸಿಕ್ಕಿಬಿದ್ದ ಆರೋಪಿಗಳು ಹೂಡಿಕೆ ಹೆಸರಿನಲ್ಲಿ ಜನರಿಗೆ ಬರೋಬ್ಬರಿ 854 ಕೋಟಿ ರೂ. ವಂಚಿಸಿದ್ದರು. ರಾಜ್ಯ ರಾಜಧಾನಿಯಲ್ಲಿನ ಸೈಬರ್​​ ವಂಚಕರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಇದುವರೆಗೆ ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ (Commissioner Dayanand) ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ನಗರ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಕ್ರೈಮ್ ದೂರುಗಳನ್ನು ದಾಖಲು ಮಾಡಲಾಗುತ್ತಿದೆ. ಇಲ್ಲಿಯವರೆಗೆ 18 ಮಾದರಿಯಲ್ಲಿ ಸೈಬರ್ ಕ್ರೈಮ್ ಆಗಿವೆ. ಈ ಪೈಕಿ 12,615 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 470 ಕೋಟಿ ರೂ. ಹಣ ವಂಚನೆ ಮಾಡಲಾಗಿದೆ. ಇದರಲ್ಲಿ 201 ಕೋಟಿ ರೂ. ಹಣವನ್ನು ಅರೋಪಿಗಳ ಅಕೌಂಟ್​ನಲ್ಲಿ ಫ್ರೀಜ್ ಮಾಡಲಾಗಿದೆ. 27 ಕೋಟಿ ರೂ. ಹಣವನ್ನು ಕಳೆದುಕೊಂಡವರಿಗೆ ವಾಪಸ್ಸು ನೀಡಲಾಗಿದೆ. ಆಧಾರ್ ಬಯೋಮೆಟ್ರಿಕ್​​ಗಳನ್ನು ಬಳಸಿ ಚೀಟಿಂಗ್ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಾಗಿ ಗಮನ ಹರಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಇನ್ನು ಪೊಲೀಸ್ ಕಮಿಷನರ್ ಕಚೇರಿ ಹತ್ತಿರದಲ್ಲಿ ಬಸ್ ಸ್ಟಾಂಡ್ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಲಾಗಿದೆ. ಬಸ್ ಶೆಲ್ಟರ್ ಕಳ್ಳತನ ಅಥವಾ ಮಿಸ್ ಆಗಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳು ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ತೆರವು ಮಾಡಿದ್ದಾರೆ. ಆದರೆ ಬಸ್ ಶೆಲ್ಟರ್ ಹಾಕಲು ಕೆಲಸ ಮಾಡುತ್ತಿದ್ದ ಸೈನ್ ಪೋಸ್ಟ್ ಕಂಪನಿಯವರು ಬಸ್ ಶೆಲ್ಟರ್ ಕಳ್ಳತನ ಆಗಿದೆ ಎಂದು ದೂರು ನೀಡಿದ್ದರು. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿತ್ತು. ನಾವು ತನಿಖೆ ನಡೆಸುತ್ತಿರುವ ವೇಳೆ ಪರಿಶೀಲನೆ ವೇಳೆ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಮಗಾರಿ ಕಳಪೆ ಎಂದು ನೋಟಿಸ್ ನೀಡಿದ್ದಾರೆ. ಆದಾದ ಬಳಿಕ ಬಿಬಿಎಂಪಿ ಅಧಿಕಾರಿಗಳು ಬಸ್ ನಿಲ್ದಾಣವನ್ನು ತೆರವು ಮಾಡಿದರು ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 10 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ