AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಸಿಡೇದಹಳ್ಳಿ(Sidedahalli)ಯಲ್ಲಿ ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
ನೇಣಿಗೆ ಶರಣಾದ ಮಮತಾ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 01, 2024 | 9:36 PM

Share

ಬೆಂಗಳೂರು ಗ್ರಾಮಾಂತರ, ಆ.01: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿ(Sidedahalli)ಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ. ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್‌ ಹಾಗೂ ಜೆ.ಪಿ.ನಗರದ ಗಣೇಶ್‌ ಎಂಬುವವರು ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.

ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು

‘ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್‌ ಮಾಡಿದಾಗ ರಿಸೀವ್‌ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್‌ ಮತ್ತು ಗಣೇಶ್‌ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಯುಟ್ಯೂಬ್ ಚಾನೆಲ್ ಮಾಲೀಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್​ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.

ಡ್ರಿಲ್ಲಿಂಗ್ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬಂಡೆಹಟ್ಟಿ ಗ್ರಾಮದ ಬಳಿ ಸ್ಟೋನ್ ಕ್ರಷರ್​ನಲ್ಲಿ ಡ್ರಿಲ್ಲಿಂಗ್ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಬಂಡೆಹಟ್ಟಿ ಗ್ರಾಮದ ನಾಗೇಂದ್ರ(38) ಮೃತ ವ್ಯಕ್ತಿ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ