ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು

| Updated By: ವಿವೇಕ ಬಿರಾದಾರ

Updated on: Aug 28, 2023 | 7:49 AM

2018ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ್ ಪೇಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ 2020 ರಲ್ಲೂ ತೆಲಂಗಾಣದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು
ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆ
Follow us on

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ (Cubbon Park) ಪೊಲೀಸ್ ಠಾಣೆಯಲ್ಲಿ ತೆಲಂಗಾಣ (Telangan) ಕಾಂಗ್ರೆಸ್ ನಾಯಕ (Congress Leader) ಕುಂಭಂ ಶಿವಕುಮಾರ್ ರೆಡ್ಡಿ (K Shivakumar Reddy) ವಿರುದ್ಧ ಅತ್ಯಾಚರ ಪ್ರಕರಣ ದಾಖಲಾಗಿದೆ. ಕುಂಭಂ ಶಿವಕುಮಾರ್ ರೆಡ್ಡಿ ತೆಲಾಂಗಣ ನಾರಾಯಣ್ ಪೇಟ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿದ್ದು, ನಗರದ ಪ್ರತಿಷ್ಟಿತ ಖಾಸಗಿ ಹೊಟೇಲ್​ನಲ್ಲಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಶಿವಕುಮಾರ್ ರೆಡ್ಡಿ 2018ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ್ ಪೇಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

2020ರಲ್ಲೂ ಶಿವಕುಮಾರ್ ರೆಡ್ಡಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

2020ರಲ್ಲೂ ಕೆ.ಶಿವಕುಮಾರ ರೆಡ್ಡಿ ವಿರುದ್ಧ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. 2020ರಲ್ಲಿ ಶಿವಕುಮಾರ್​​ ರೆಡ್ಡಿ 45 ವರ್ಷದ ಮಹಿಳೆಯೊಬ್ಬರನ್ನು ಭೇಟಿಯಾಗುತ್ತಾರೆ. ನಂತರ ಇಬ್ಬರ ನಡುವೆ ಸ್ನೇಹ ಬೆಳೆಯುತ್ತದೆ. ದಿನಗಳು ಕಳೆಯುತ್ತಾ ಶಿವಕುಮಾರ್​​ ರೆಡ್ಡಿ, ಮಹಿಳೆಗೆ ಹತ್ತಿರವಾಗುತ್ತಾ ಹೋಗುತ್ತಾರೆ. ಒಂದು ದಿನ ಶಿವಕುಮಾರ್​ ರೆಡ್ಡಿ ತನ್ನನ್ನು ಮದುವೆಯಾಗುವಂತೆ ಮಹಿಳೆ ಎದರು ಪ್ರಸ್ತಾಪ ಇಟ್ಟಿದ್ದನು.

ಆಗ ಮಹಿಳೆ, ಶಿವಕುಮಾರ್​ ರೆಡ್ಡಿ ಅವರ ಮೊದಲ ಪತ್ನಿ ಬಗ್ಗೆ ವಿಚಾರಿಸಿದಾಗ “ನನ್ನ ಹೆಂಡತಿ ಅನಾರೋಗ್ಯದಿಂದ ಬಳಲುತ್ತಿದ್ದಾಳೆ. ಮತ್ತು ಮೂರು ವರ್ಷಗಳಿಗಿಂತ ಹೆಚ್ಚು ಬದುಕುಳಿಯುವುದಿಲ್ಲ. ಆದ್ದರಿಂದ ಅವಳನ್ನು ನೋಡಿಕೊಳ್ಳಲು ಒಬ್ಬ ಮಹಿಳೆ ಬೇಕು” ಎಂದು ಉತ್ತರಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಒಡವೆ ಹಾಕೊಂಡು, ಸ್ಕಾರ್ಪಿಯೋ ವಾಹನದಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕದಿಯುತ್ತಿದ್ದ ಮತ್ತೊಂದು ಗ್ಯಾಂಗ್​ ಅರೆಸ್ಟ್​

ನಂತರ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಬಳಿಕ ಶಿವಕುಮಾರ್​ ರೆಡ್ಡಿ, ಮಹಿಳೆಯನ್ನು ಪಂಜಗುಟ್ಟದ ಪ್ರತಿಷ್ಟಿತ ಸ್ಟಾರ್ ಹೋಟೆಲ್‌ಗೆ ಕರೆದು, ಅನುಮತಿ ಇಲ್ಲದೆ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ನಂತರ ಮಹಿಳೆಯ ನಗ್ನ ಚಿತ್ರಗಳನ್ನು ಮೊಬೈಲ್​​ನಲ್ಲಿ ಸೆರೆ ಹಿಡಿದು ನಾನು ಹೇಳಿದಂತೆ ಕೇಳದೆ ಇದ್ದರೇ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂಸತ್ರಸ್ತೆ ದೂರಿನಲ್ಲಿ ದಾಖಲಿಸಿದ್ದರು.

ಶಿವಕುಮಾರ್​ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 417, 420, 376 ಮತ್ತು 506 ಅಡಿ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ