AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣ ಪತ್ತೆ; ಬೆಂಗಳೂರಿನಲ್ಲಿ 2457 ಪ್ರಕರಣ

ಬೆಂಗಳೂರಿನಲ್ಲಿ ಡೆಂಗ್ಯೂ ರಣಕೇಕೆ ಮುಂದುವರಿದಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಳಿ ಅತಿಯಾಗಿದೆ. ಈ ಮಧ್ಯೆ, ಬೆಂಗಳೂರಿನಲ್ಲಿ ಟೆಸ್ಟಿಂಗ್ ಕಿಟ್​​ಗಳ ಕೊರತೆ ಎದುರಾಗಿರುವುದು, ನೈರ್ಮಲ್ಯ ಕಡೆಗಣಿಸಲ್ಪಡುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಇತರ ಜಿಲ್ಲೆಗಳ ಡೆಂಗ್ಯೂ ಸ್ಥಿತಿಗತಿಯ ವಿವರ ಇಲ್ಲಿದೆ.

ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣ ಪತ್ತೆ; ಬೆಂಗಳೂರಿನಲ್ಲಿ 2457 ಪ್ರಕರಣ
ಡೆಂಗ್ಯೂ (ಸಾಂದರ್ಭಿಕ ಚಿತ್ರ)
ಶಾಂತಮೂರ್ತಿ
| Updated By: Ganapathi Sharma|

Updated on: Jul 01, 2024 | 6:50 AM

Share

ಬೆಂಗಳೂರು, ಜುಲೈ 1: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ತಾಂಡವವಾಡುತ್ತಿದ್ದರೆ ಅದರ ವೇಗಕ್ಕೆ ಲಗಾಮು ಹಾಕಲು ಕ್ರಮ ಕೈಗೊಳ್ಳಬೇಕಿದ್ದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಕೊರತೆ ಎದುರಾಗಿದೆ. ಸದ್ಯ ಇದೇ ವಿಚಾರ ಈಗ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಬೆಂಗಳೂರಿನಲ್ಲಿ ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.

ರೋಗವನ್ನು ತ್ವರಿತವಾಗಿ ಪತ್ತೆ ಹಚ್ಚಲು ಪಾಲಿಕೆಯಿಂದ ಇದೀಗ ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ನಗರದ ಆರೋಗ್ಯ ಕೇಂದ್ರಗಳಲ್ಲಿ ಡೆಂಗ್ಯೂ ಟೆಸ್ಟಿಂಗ್​ಗೆ ಬೇಕಾದ ಎನ್​ಎಸ್1 ಕಿಟ್​ಗಳೇ ಸಾಕಷ್ಟು ಇಲ್ಲವಂತೆ. ಆಸ್ಪತ್ರೆಗಳಲ್ಲಿ ನಿತ್ಯ 200 ರಿಂದ 250 ಟೆಸ್ಟ್ ಮಾತ್ರ ಮಾಡಲಾಗುತ್ತಿದೆ. ಇದೀಗ, ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ, 30 ಸಾವಿರ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಕೆಎಸ್​​ಎಂಸಿಗೆ ಪಾಲಿಕೆ ಬೇಡಿಕೆ ಇಟ್ಟಿದೆ. ಈ ಬಗ್ಗೆ ಬಿಬಿಎಂಪಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಸೂರಲ್ಕರ್ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ ಗದಗ, ಚಿತ್ರದುರ್ಗ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲೂ ಡೆಂಗ್ಯೂ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್​ಗಳ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾವಾರು ಡೆಂಗ್ಯೂ ಪ್ರಕರಣಗಳ ವಿವರ

ತುಮಕೂರು ಜಿಲ್ಲೆಯಲ್ಲಿ ಆರೇ ತಿಂಗಳಲ್ಲಿ 170 ಪ್ರಕರಣಗಳು ಪತ್ತೆಯಾಗಿದ್ದರೆ, ಗದಗದಲ್ಲಿ ಇದೇ ತಿಂಗಳಲ್ಲಿ ಒಟ್ಟು 31 ಮಕ್ಕಳಿಗೆ ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಇನ್ನು ಮಂಡ್ಯದಲ್ಲಿ ಎರಡು ತಿಂಗಳಲ್ಲಿ 150ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂವಕ್ಕರಸಿಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವು

ಸದ್ಯ ಪ್ರತಿ ಶುಕ್ರವಾರ ಮಾತ್ರ ಮನೆ ಮನೆ ಸರ್ವೇ ನಡೆಯುತ್ತಿದೆ. ಮನೆಗಳಿಗೆ ಹೋಗಿ ಜನರಿಗೆ ತಿಳಿಹೇಳುವ ಕಾರ್ಯವೂ ಬೆಂಗಳೂರು ವ್ಯಾಪ್ತಿಯಲ್ಲಿ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ