ಬೆಂಗಳೂರಿನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರಿನ(Bengaluru) ಆರ್​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಬಳಿಕ ಮನೆಯಲ್ಲಿದ್ದ 6 ಲಕ್ಷ ನಗದು, ಚಿನ್ನ ದರೋಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ
ಆರೋಪಿಗಳು, ಹಲ್ಲೆಗೊಳಗಾದ ಅಣ್ಣಮ್ಮ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 3:59 PM

ಬೆಂಗಳೂರು, ಮಾ.29: ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ(Bengaluru) ಆರ್​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ತನ್ನ ಅಕ್ಕನ ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರನ್ನ ಇವರು ಸಾಕಿಕೊಂಡಿದ್ದರು. ಆರೋಪಿ ಮುನಿರಾಜು ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ, ಇಲ್ಲಿ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಸುಮಿತ್ರಾ ಹಾಗೂ ಮುನಿರಾಜು ಅಣ್ಣಮ್ಮನನ್ನು  ಕರೆದೊಯ್ದಿದ್ದರು. ಈ ವೇಳೆ ಅಣ್ಣಮ್ಮಗೆ ಚಾಕು ಇರಿದಿರುವ ಮುನಿರಾಜು, ಬಳಿಕ ಮನೆಯಲ್ಲಿದ್ದ 6 ಲಕ್ಷ ನಗದು, ಚಿನ್ನ ದರೋಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್​ಗೆ ಲಾರಿ ಡಿಕ್ಕಿ, ಅರಣ್ಯ ಇಲಾಖೆ ಸಿಬ್ಬಂದಿ ರಾಕೇಶ್(28) ಸಾವು

ಬೆಂಗಳೂರು ಗ್ರಾಮಾಂತರ: ಆನೇಕಲ್​ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅರಣ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ರಾಕೇಶ್(28) ಮೃತ ರ್ದುದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಇವರು ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಯಾಗಿದ್ದು, ಎಟಿಎಂಗೆ ಹೋಗಿ ಬರುವುದಾಗಿ ಬೈಕ್​​ನಲ್ಲಿ ತೆರಳಿದ್ದ ವೇಳೆ ಅಪಘಾತ ನಡೆದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು

ಧಾರವಾಡದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆ

ಧಾರವಾಡ: ಕೃಷಿ ವಿಶ್ವ ವಿದ್ಯಾಲಯ ಬಳಿಯ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.70 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಅಥಣಿಯಿಂದ ಧಾರವಾಡಕ್ಕೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಣ ಜಪ್ತಿ ಮಾಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Fri, 29 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ