ಹುಡುಗ, ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್‌; ಆರೋಪಿ ಅರೆಸ್ಟ್​

ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕೆಂದು ಮೇಸೆಜ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು(Police) ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ ಫೋನ್​ನ್ನು ವಶಪಡಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಹುಡುಗ, ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್‌; ಆರೋಪಿ ಅರೆಸ್ಟ್​
ಆನಂದ್ ಶರ್ಮಾ ಬಂಧಿತ ಆರೋಪಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jul 07, 2024 | 9:14 PM

ಬೆಂಗಳೂರು, ಜು.07: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕೆಂದು ಮೇಸೆಜ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು(Police) ಬಂಧಿಸಿದ್ದಾರೆ. ಆನಂದ್ ಶರ್ಮಾ ಬಂಧಿತ ಆರೋಪಿ. ಇತ ಹಲವಾರು ಮೊಬೈಲ್ ನಂಬರ್ ಬಳಸಿ, ಹುಡುಗಿಯರ ಸರ್ವಿಸ್ ಬೇಕಾ? ಎಂದು ಕರೆ ಮಾಡುತ್ತಿದ್ದ. ಅದರಂತೆ ಕರೆ ಮಾಡುತ್ತಿದ್ದರ ಬಗ್ಗೆ ಸುಭಿ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮೊಬೈಲ್ ನಂಬರ್ ಆಧರಿಸಿ ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನ ಪೂರ್ವ ವಿಭಾಗ CEN ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ ಫೋನ್​ನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ರಸ್ತೆ ಬದಿಯ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನ

ದಕ್ಷಿಣ ಕನ್ನಡ: ಮಂಗಳೂರಿನ ಕೋಡಿಕಲ್​ನ ರಸ್ತೆ ಬದಿಯ ಮನೆಯಲ್ಲಿ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕಳ್ಳತನಕ್ಕೆ ಯತ್ನಿಸಿದ ದುಷ್ಕರ್ಮಿಗಳ ಖತರ್ನಾಕ್ ಗ್ಯಾಂಗ್​ನ ಚಲನವಲನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಮನೆಯವರು ಮಲಗಿದ್ದ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿದ್ದರು. ಈ ಹಿನ್ನಲೆ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇತ್ತ ಪೊಲೀಸರು ಕೂಡ ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸು ಪಾಸಿನಲ್ಲಿ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿ ಇರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಟೀ‌ ಕುಡಿಯಲು ತೆರಳಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 2023 ರ ಮಾ.4 ರಂದು ಈ ಕಾರ್ಖಾನೆಯಲ್ಲೇ ಬಾಯ್ಲರ್ ಸ್ಪೋಟ ಆಗಿತ್ತು. ಆಗ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದವು. ಕಳಪೆ ಬಾಯ್ಲರ್ ನಿರ್ಮಾಣದಿಂದ ಅವಘಡ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ