ಬೆಂಗಳೂರು, ಮೇ 14: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ (Bengaluru Rains) ನಿಜ. ಆದರೆ, ಅದಕ್ಕೂ ಮುನ್ನ ಬಿಸಿಲಿನ ಪ್ರಮಾಣ ಸಿಕ್ಕಾಪಟ್ಟೆ ಜಾಸ್ತಿಯಾಗಿತ್ತು. ಇದರ ಪರಿಣಾಮ ಈ ವಾರ ಕೂಡ ತರಕಾರಿಗಳ ಬೆಲೆ (Vegetable Price) ಏರಿಕೆಯಾಗಿದ್ದು, ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹೆಚ್ಚು ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಪ್ರತಿ ತರಕಾರಿ ದರ ಕೆಜಿಗೆ ಸುಮಾರು 20 ರೂಪಾಯಿಯಷ್ಟು ಏರಿಕೆಯಾಗಿದೆ.
ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬರುವ ಅಲ್ಪ ತರಕಾರಿಗಳಿಗೆ ವ್ಯಾಪಾರಿಗಳು ಹೆಚ್ಚಿನ ಬೆಲೆ ನಿಗದಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ ತರಕಾರಿಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಇದು ಸೋಮವಾರ ಮಾರಾಟವಾದ ತರಕಾರಿಗಳ ಬೆಲೆ. ಕಳೆದ ವಾರ ಸೌತೆಕಾಯಿ ಹಾಗೂ ನಿಂಬೆಹಣ್ಣು ಬೆಲೆ ಏರಿಕೆಯಾಗಿತ್ತು. ಬೇರೆ ತರಕಾರಿಗಳ ಬೆಲೆ 60 ರೂ. ಒಳಗೆಯೇ ಇತ್ತು. ಆದರೆ ಈ ವಾರ ಬೀನ್ಸ್, ಕ್ಯಾರೇಟ್, ಬದನೆಕಾಯಿ, ಹಸಿರುಮೆಣಸಿನಕಾಯಿ, ಟೋಮಾಟೋ, ಬಟಾಣಿ, ಬೆಳ್ಳುಳ್ಳಿ ಸತತವಾಗಿ ಏರಿಕೆಯಾಗುತ್ತಿದೆ. ಸದ್ಯ ಒಂದು ವಾರದಿಂದ ಮಳೆಯಾಗುತ್ತಿದೆ. ಮಳೆ ಬಂದರೆ ಟೋಮೆಟೋ ಹಾಗೂ ಈರುಳ್ಳಿ ಬೆಲೆ ಏರಿಕೆಯಾಗುತ್ತದೆ. ಮಳೆ ಬಂದಿಲ್ಲ ಅಂದರೆ ತರಕಾರಿಗಳ ಬೆಲೆ ಏರಿಕೆಯಾಗುತ್ತೆ. ಮುಂದಿನವಾರ ತರಕಾರಿಗಳ ಬೆಲೆ ಕೊಂಚ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.
ಬೀನ್ಸ್ ಬೆಲೆ ಅಂತೂ 200 ರೂ. ಗಡಿದಾಟಿದೆ. ಈ ಮಧ್ಯೆ ಸೌತೆಕಾಯಿ ಹಾಗೂ ಬಿಂಬೆಹಣ್ಣಿನ ಬೆಲೆ ಕೂಡ ತುಂಬಾ ಜಾಸ್ತಿಯಾಗಿದೆ.
ತರಕಾರಿಗಳ ಬೆಲೆ ಅಷ್ಟೇ ಅಲ್ಲದೆ ಹಣ್ಣುಗಳ ಬೆಲೆ ಕೂಡ ಈ ವಾರ ಏರಿಕೆಯಾಗಿದೆ. ಜನರಿಂದ ಹಣ್ಣುಗಳಿಗೆ ಹೆಚ್ಚು ಬೇಡಿಕೆ ಬರುತ್ತಿರುವ ಬೆನ್ನಲ್ಲೇ, ದರ ದುಬಾರಿಯಾಗಿದೆ.
ಇದನ್ನೂ ಓದಿ: ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:16 am, Tue, 14 May 24