ಎಲೆಕ್ಷನ್ ಬಜೆಟ್​​ನಲ್ಲಿ ಮಹಿಳೆಯರಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ

ಈ ಬಾರಿಯ ಬಜೆಟ್​​ನಲ್ಲಿ ಜನ ಕಲ್ಯಾಣಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತನೆ ನಡೆಸಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತಿಸಿದ್ದೇವೆ. ಸ್ತ್ರೀಶಕ್ತಿ ಸ್ವಹಾಯ ಸಂಘಗಳಿಗೆ 5 ಲಕ್ಷ ರೂ. ಸಾಲ ನೀಡುವ ಯೋಚನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಲೆಕ್ಷನ್ ಬಜೆಟ್​​ನಲ್ಲಿ ಮಹಿಳೆಯರಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿImage Credit source: deccanherald.com
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 14, 2023 | 1:15 PM

ಬೆಂಗಳೂರು: ಈ ಬಾರಿಯ ಬಜೆಟ್​​ನಲ್ಲಿ ಜನ ಕಲ್ಯಾಣಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತನೆ ನಡೆಸಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತಿಸಿದ್ದೇವೆ. ಸ್ತ್ರೀಶಕ್ತಿ ಸ್ವಹಾಯ ಸಂಘಗಳಿಗೆ 5 ಲಕ್ಷ ರೂ. ಸಾಲ ನೀಡುವ ಯೋಚನೆ ಇದೆ. ಈ ಬಾರಿಯ ಬಜೆಟ್​​ನಲ್ಲಿ ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜನವರಿ 17ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಜೆಟ್​​ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಿದ್ದೇವೆ. ಸಂಪುಟ ಸಭೆಯಲ್ಲಿ ಬಜೆಟ್​ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ವಿತ್ತ ಸಚಿವರ ಜೊತೆ ಸಭೆ ನಡೆಸಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಬೆಂಬಲ ನೀರಿಕ್ಷೆ ಮಾಡಿದ್ದೇವೆ. ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬೆಂಬಲ ಸಿಗಲಿದೆ. ದುಡಿಯುವ ವರ್ಗಕ್ಕೆ ಸಹಾಯವಾಗುವ ಕೆಲಸ ಮಾಡುತ್ತೇವೆ. ಪ್ರತಿಯೊಂದು ಕುಟುಂಬಕ್ಕೆ ಮನೆ ಕೊಡಿಸುವ ಕಾರ್ಯಕ್ಕೆ ಹೆಣ್ಣು ಮಕ್ಕಳ ಹೆಸರಿನಲ್ಲಿ ಯೋಜನೆ ತರುತ್ತೇವೆ. ಸ್ತೀಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆ ತರುತ್ತೇವೆ. ವಿಶೇಷ ಯೋಜನೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:  ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್​ಗೆ, ಮುರುಗೇಶ್ ನಿರಾಣಿ ಖಡಕ್ ಎಚ್ಚರಿಕೆ

ಕಾರ್ಯರೂಪಕ್ಕೆ ತರಲು ಆಗಲ್ಲ ಎಂಬುವುದು ಕಾಂಗ್ರೆಸ್​ಗೂ ಗೊತ್ತು

ಉಚಿತವಾಗಿ ವಿದ್ಯುತ್​ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಹೇಳಿದ್ದಾರೆ. ಎಲ್ಲ ವಿದ್ಯುತ್​ ಸರಬರಾಜು ನಿಗಮಗಳನ್ನು ಕಾಂಗ್ರೆಸ್​ ಸಾಲದ ಸುಳಿಗೆ ಸಿಲುಕಿಸಿತ್ತು. ಕಾರ್ಯರೂಪಕ್ಕೆ ತರಲು ಆಗಲ್ಲ ಎಂಬುದು ಕಾಂಗ್ರೆಸ್​ಗೂ ಗೊತ್ತು. ಕಾಂಗ್ರೆಸ್​ ನಾಯಕರು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್​​ ಘೋಷಣೆ ಮಾಡಿದ ಯೋಜನೆಗೆ ಹಣದ ಕೊರತೆಯಾಗುತ್ತೆ ಎಂದು ಹೇಳಿದರು.

ಸದಾಶಿವ ಆಯೋಗ, ಕಾಂತರಾಜು ಆಯೋಗ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರವರ್ಗ 2 ಕ್ಕೆ ಸೇರಿಸಲು ಹೆಜ್ಜೆ ಇಟ್ಡಿದ್ದೇವೆ. ಹೆಚ್ಚಳ ಮಾಡುವುದಕ್ಕೆ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದಲ್ಲಿ ಕೆಲವು ನಿಯಮಗಳಿವೆ. ಅದನ್ನು ಕೂಡ ಆದಷ್ಟು ಬೇಗ ಮಾಡಲಿದ್ದೇವೆ.

ಇದನ್ನೂ ಓದಿ:  ಏಳು ವರ್ಷಗಳೇ ಕಳೆದರೂ ಸರಿಯಾಗಿ ಸಿಮೆಂಟ್ ಕಲಿಸಿಲ್ಲ, ಕಾಮಗಾರಿ ಪೂರ್ಣಗೊಂಡಿಲ್ಲ -ಆದರೂ ಹಾಸ್ಟೆಲ್ ಉದ್ಘಾಟನೆ ಭಾಗ್ಯ!

ವೈಯಕ್ತಿಕ ನಿಂದನೆ ಸರಿಯಲ್ಲ,ಇದು ಕರ್ನಾಟಕದ ಸಂಸ್ಕೃತಿಯಲ್ಲ

ನಿರಾಣಿ ವಿರುದ್ದ ಯತ್ನಾಳ್ ಪಿಂಪ್ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಸಾರ್ವಜನಿಕ ಜೀವನದಲ್ಲಿ ಎಲ್ಲರೂ ಜನಮನ್ನಣೆ ಪಡೆದುಕೊಂಡು ಬಂದಿರೋದು. ವೈಯಕ್ತಿಕ ನಿಂದನೆ ಸರಿಯಲ್ಲ. ಇದು ಕರ್ನಾಟಕದ ಸಂಸ್ಕೃತಿಯಲ್ಲ. ಅವರು ಆ ರೀತಿ ಹೇಳಿಕೆ ನೀಡಿದರೇ ಅದು ಅವರ ಸಂಸ್ಕೃತಿ. ಪಂಚಮಸಾಲಿ ಸಮುದಾಯದ ಅಧ್ಯಕ್ಷರು ಕಾಶೆಪ್ಪನವರ್ ಒಬ್ಬರು ಶಾಸಕರಾಗಿದ್ದರು, ಅವರ ತಂದೆ ಮಂತ್ರಿಯಾಗಿದ್ದರು. ಅವರು ಯಾಕೆ ಮೀಸಲಾತಿ ಮಾಡಿಲ್ಲ. ವರದಿಯನ್ನು ತಿರಸ್ಕಾರ ಮಾಡಲಾಯಿತು. ಮೀಸಲಾತಿ ಮಾಡೋಕೆ ಬರಲ್ಲ ಎಂದು ಹೇಳಿದರು. ಆಗ ಯಾಕೆ ಬಾಯಿ ತೆಗೆಯಲಿಲ್ಲ, ಮಾತನಾಡಲಿಲ್ಲ. ಈಗ ಅವರಿಗೆ ಯಾವ ನೈತಿಕತೆ ಇದೆ. ಅವರ ಅಕ್ಕಪಕ್ಕ ಯಾರಿದ್ದಾರೆ ಎಂದು ಸ್ವಾಮೀಜಿ ನೋಡಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ
ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ
Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ
Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ
ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ