AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲು

ಇತ್ತೀಚಿಗೆ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಮಕ್ಕಳನ್ನು ದುಷ್ಕರ್ಮಿಗಳು ತಮ್ಮ ಕಾಮ ತೃಷೆಗಾಗಿ ಬಳಸಿಕೊಳ್ಳುತ್ತಿರುವುದು ಹೀನ ಸಂಗತಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗುತ್ತಿದೆ. ಒಂದೇ ತಿಂಗಳಲ್ಲಿ 24 ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲೆ ದೃಷ್ಕೃತ್ಯವೆಸಗಿದ ಆರೋಪಿಗಳಿಗೆ ಪೋಕ್ಸೋ ಕಾಯ್ದೆಯಡಿ ಶಿಕ್ಷೆ ನೀಡಲಾಗುತ್ತದೆ.

ಬೆಂಗಳೂರಲ್ಲಿ ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲು
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 16, 2023 | 8:38 AM

Share

ಬೆಂಗಳೂರು: ಇತ್ತೀಚಿಗೆ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಮಕ್ಕಳನ್ನು ದುಷ್ಕರ್ಮಿಗಳು ತಮ್ಮ ಕಾಮ ತೃಷೆಗಾಗಿ ಬಳಸಿಕೊಳ್ಳುತ್ತಿರುವುದು ಹೀನ ಸಂಗತಿಯಾಗಿದೆ. ಮಕ್ಕಳ (Children) ಮೇಲೆ ಲೈಂಗಿಕ ದೌರ್ಜಜ್ಯವೆಸಗಿ ಕೊಲೆ ಮಾಡಿದ ಪ್ರಕರಣಗಳೂ ವರದಿಯಾಗಿವೆ. ಮಕ್ಕಳ ಮೇಲೆ ದೃಷ್ಕೃತ್ಯವೆಸಗಿದ ಆರೋಪಿಗಳಿಗೆ ಪೋಕ್ಸೋ (Pocso) ಕಾಯ್ದೆಯಡಿ ಶಿಕ್ಷೆ ನೀಡಲಾಗುತ್ತದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗುತ್ತಿದೆ. ಒಂದೇ ತಿಂಗಳಲ್ಲಿ 24 ಪ್ರಕರಣಗಳು ದಾಖಲಾಗಿವೆ. ನೆರೆ ಮನೆಯವರು, ಸಂಬಂಧಿಕರೂ ಮಕ್ಕಳ ಮೇಲೆ ದೌರ್ಜ್ಯನೆವೆಸಗಿರುವುದೇ ಹೆಚ್ಚಾಗಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹದಿಹರೆಯದ ಯುವತಿಯರು

ಇದೊಂದಡೆಯಾದರೇ ಕೆಲ ತಿಂಗಳ ಹಿಂದೆ ಬಿಡುಗಡೆಯಾದ ವರದಿ ಪ್ರಕಾರ ಹದಿಹರೆಯದ ಯುವತಿಯರು ಪ್ರೇಮಕ್ಕೆ ಸಿಲುಕುತ್ತಿದ್ದು, ಇದರಿಂದ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಓದುವ ಹಂತದಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಮೊಬೈಲ್‌ ಬಳಕೆ, ಸಾಮಾಜಿಕ ಜಾಲತಾಣ, ಸಿನಿಮಾ ಇತ್ಯಾದಿ ಪ್ರೇರಣೆಯಿಂದ ಪ್ರೀತಿ, ಪ್ರೇಮ, ಪ್ರಣಯದಂತ ಮೋಸದ ಬಲೆಗೆ ಸಿಲುಕುತ್ತಾರೆ. ನಂತರ ಅತ್ಯಾಚಾರ, ಶೋಷಣೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.

ಏನಿದು ಪೋಕ್ಸೋ ಕಾಯ್ದೆ

2012 Protection of Children from Sexual Offences Act ಅನ್ನು (POCSO ACT) ಎಂದು ಕರೆಯಲಾಗುತ್ತಿದೆ. ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಅಪರಾಧಗಳಿಂದ ಮಕ್ಕಳ ರಕ್ಷಣೆಗಾಗಿ ದೃಢವಾದ ಕಾನೂನು ಚೌಕಟ್ಟನ್ನು ಒದಗಿಸಲು ಪೊಕ್ಸೊ ಕಾಯ್ದೆಯನ್ನು 2012ರಲ್ಲಿ ಜಾರಿಗೆ ತರಲಾಯಿತು. ಈ ಮೂಲಕ ಮಕ್ಕಳನ್ನು ಎಲ್ಲ ರೀತಿಯ ಲೈಂಗಿಕ ದೌರ್ಜನ್ಯ ಅಪರಾಧಗಳಿಂದ ಪಾರು ಮಾಡುವುದು ಕಾಯಿದೆಯ ಮುಖ್ಯ ಉದ್ದೇಶವಾಗಿದೆ. ಈ ಕಾಯಿದೆ ಯಾವುದೇ ಲಿಂಗತಾರತಮ್ಯ ಮಾಡುವುದಿಲ್ಲ ಬಾಲಕಿ ಮತ್ತು ಬಾಲಕ ಇಬ್ಬರನ್ನು ಲೌಂಗಿಕ ದೌರ್ಜನ್ಯದ ಸಂತ್ರಸ್ತರು ಎಂದು ಪರಿಗಣಿಸುತ್ತದೆ.

ಇದನ್ನೂ ಓದಿ: ಹುಟ್ಟುಹಬ್ಬದ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​

ಪೋಕ್ಸೋ ಕಾಯ್ದೆ ಅಡಿ ಶಿಕ್ಷೆ

  1. ಪೋಕ್ಸೋ ಕಾಯಿದೆಯಡಿಯ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ. 2019ರ ತಿದ್ದುಪಡಿಯ ಬಳಿಕ ಶಿಕ್ಷೆ ಇನ್ನಷ್ಟು ಕಠಿಣಗೊಳಿಸಲಾಗಿದೆ. ಈ ಕಾಯಿದೆಯಡಿ ಗರಿಷ್ಠ ದಂಡದೊಂದಿಗೆ ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಮಕ್ಕಳ ಮೇಲಿನ ಲೈಂಗಿಕ ಬೇಧಕ ಅಪರಾಧಕ್ಕೆ ಕಾಯಿದೆಯಡಿ ಶಿಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಅಪರಾಧಕ್ಕೆ ಆರೋಪಿಗೆ 10 ವರ್ಷಕ್ಕಿಂತ ಕಡಿಮೆ ಇಲ್ಲದ ಜೀವಾವಧಿ ಶಿಕ್ಷೆ ಖಚಿತ ಮತ್ತು ಅದನ್ನು ವಿಸ್ತರಿಸಲೂಬಹುದು. ಈ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳವರೆಗೂ ಹೆಚ್ಚಿಸಬಹುದಾಗಿದೆ.
  2. ಬೇಧಕ ಲೈಂಗಿಕ ದೌರ್ಜನ್ಯ: ಈ ಅಪರಾಧಕ್ಕೆ ಕನಿಷ್ಟ 7 ವರ್ಷಗಳಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಹೆಚ್ಚಿಸಲಾಗಿದೆ. 16 ವರ್ಷದೊಳಗಿನ ಮಗುವಿನ ಮೇಲೆ ಬೇಧಕ ಲೈಂಗಿಕ ದೌರ್ಜನ್ಯ ನಡೆಸಿದರೆ, ಅಪರಾಧಿಗೆ ದಂಡಸಹಿತ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ.
  3. ತೀವ್ರ ಬೇಧಕ ಲೈಂಗಿಕ ದೌರ್ಜನ್ಯ: ತೀವ್ರ ಬೇಧಕ ಲೈಂಗಿಕ ದೌರ್ಜನ್ಯಕ್ಕೆ ಇದ್ದ 10 ವರ್ಷಗಳ ಶಿಕ್ಷೆಯನ್ನು 20 ವರ್ಷಗಳವರೆಗೂ ಹೆಚ್ಚಿಸಲಾಗಿದೆ. ಗರಿಷ್ಠ ಜೀವಾವಧಿ ಶಿಕ್ಷೆಯಿಂದ ಮರಣ ದಂಡನೆ ಕೂಡ ವಿಧಿಸಬಹುದು.
  4. ಅಶ್ಲೀಲ ಚಿತ್ರಗಳಲ್ಲಿ ಮಗುವನ್ನು ಬಳಸುವುದು: ಈ ಅಪರಾಧದಲ್ಲಿ ಆರೋಪಿಗೆ ಕನಿಷ್ಠ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಬೇಧಕ ಲೈಂಗಿಕ ದೌರ್ಜನ್ಯ ನಡೆದಿದ್ದರೆ ಗರಿಷ್ಠ 20 ವರ್ಷಗಳ ವರೆಗೆ ಶಿಕ್ಷೆ ವಿಧಿಸಬಹುದು, ಅಶ್ಲೀಲ ಸಾಮಗ್ರಿಗಳ ಸಂಗ್ರಹ ಅಪರಾಧಕ್ಕೆ ಕನಿಷ್ಠ 3 ವರ್ಷಗಳವರೆಗೆ ಇದ್ದ ಶಿಕ್ಷೆಯನ್ನು 5 ವರ್ಷಗಳವರೆಗೆ ಹೆಚ್ಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು