ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ರೇಡ್​​

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ರೇಡ್​​
ಆದಾಯ ತೆರಿಗೆ ಇಲಾಖೆ
Follow us
Jagadisha B
| Updated By: ವಿವೇಕ ಬಿರಾದಾರ

Updated on:Feb 07, 2024 | 10:58 AM

ಬೆಂಗಳೂರು, ಫೆಬ್ರವರಿ 07: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT) ಬೆಳ್ಳಂಬೆಳಿಗ್ಗೆ ಬೆಂಗಳೂರಿನ (Bengaluru) ಕೆಲ ಖಾಸಗಿ ಕಂಪನಿಗಳ ಮೇಲೆ ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಜಯನಗರ ಎಂಟನೇ ಬ್ಲಾಕ್​ನಲ್ಲಿರುವ ಆಂಧ್ರಪ್ರದೇಶ ಮೂಲದ ಉದ್ಯಮಿಗೆ ಸೇರಿದ ಕಚೇರಿ, ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿ: ನಗರದ ಶ್ರೀನಿವಾಸ್ ಕನ್ಸಟ್ರಕ್ಷನ್ಸ್ ಮಾಲಿಕರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ರಸ್ತೆ, ಕ್ಯಾನಲ್ ಸೇರಿದಂತೆ ವಿವಿಧ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಆಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Wed, 7 February 24